ಮಂಡ್ಯ ಬಸ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸಿದ ಕುಮಾರಸ್ವಾಮಿ
ಕನಗನಮರಡಿ ಗ್ರಾಮದಲ್ಲಿ ಬಸ್ ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದು. ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮೃತ ಕುಟುಂಬಗಳಿಗೆ ಸಂತ್ವಾನ ಹೇಳಿ ಪರಿಹಾರ ಘೋಷಿಸಿದರು.
ಮಂಡ್ಯ, [ನ.24]: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣ ನೀಡೋದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಮಂಡ್ಯ ಬಸ್ ದುರಂತ: ಸಾವು ಗೆದ್ದು ಬಂದ ಬಾಲಕ ಬಿಚ್ಚಿಟ್ಟ ಭಯಾನಕ ಸತ್ಯ
ಬಸ್ ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದು. ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲಿನ ಸ್ಥಳೀಯ ನಿವಾಸಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಮಂಡ್ಯ ಬಸ್ ದುರಂತ: ರಾಷ್ಟ್ರಪತಿ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ
ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣ ನೀಡುವುದಾಗಿ ಭರವಸೆ ನೀಡಿದರು. ಸಧ್ಯ ಮಾಹಿತಿ ಪ್ರಕಾರ ಮೃತಪಟ್ಟವರ ಸಂಖ್ಯೆ 25ಕ್ಕೇರಿದ್ದು, ಮೃತ ದೇಹಗಳನ್ನ ಹೊರತೆಗೆಯಲಾಗಿದೆ.
ಇನ್ನು ಕೆಲವರು ನಾಲೆಯಲ್ಲಿ ಕೊಚ್ಚಿ ಹೋಗಿದ್ದು, ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.