ಬೆಂಗಳೂರು, (16): ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಮೂಲದ ಯೋಧ ಎಚ್​.​ ಗುರು (33 ವರ್ಷ) ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಎಚ್​.​ ಗುರು ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಶನಿವಾರ) ಘೋಷಿಸಿದ್ದಾರೆ. 

ಯಾವುದೇ ದಾಖಲೆ ಕೇಳದೆ ಹುತಾತ್ಮ ಯೋಧನ ಹಣ ನೀಡಿದ LIC

ಜೊತೆಗೆ ಗುರು ಅವರ ಪತ್ನಿ ಕಲಾವತಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಫೆ.14ರಂದು ಪಾಕ್ ಮೂಲದ ಜೈಷ್ ಇ ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರ ಸ್ಫೋಟಕ ತುಂಬಿದ ಕಾರನ್ನು ಯೋಧರು ತೆರಳುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿ ಭೀಕರ ಸ್ಫೋಟ ಸಂಭವಿಸಿತ್ತು. ಇದರಿಂದ 44  ಯೊಧರು ಹುತಾತ್ಮರಾಗಿದ್ದರು.

ಹುತಾತ್ಮರಿಗೆ ಇಡೀ ಭಾರತವೇ ಕಂಬನಿ ಮಿಡಿದಿದ್ದು, ಇದಕ್ಕೆ ಪ್ರತೀಕಾರ ಆಗಲೇಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿವೆ.