ಬೆಂಗಳೂರು :  ಸಮ್ಮಿಶ್ರ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾನ ಮತ್ತು ಅಸ್ಥಿರಗೊಳ್ಳುವ ಬಗ್ಗೆ ವದಂತಿಗಳು ಕೇಳಿಬರುತ್ತಿರುವ ನಡುವೆ ಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ತಿಂಗಳ 8ರಂದು ಬಜೆಟ್ ಮಂಡನೆಗೆ ಬಿರುಸಿನ ಸಿದ್ಧತೆ ನಡೆಸಿದ್ದಾರೆ. 

ರಾಜ್ಯದಲ್ಲಿ ಆಡಳಿತ ನಡೆಸು ತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬೀಳ ಲಿದೆ ಎಂದು ಪ್ರತಿ ಪಕ್ಷದ ನಾಯಕರು ಮಹೂರ್ತ ನಿಗದಿ ಮಾಡುತ್ತಿದ್ದಾರೆ. ಕುಮಾರ ಸ್ವಾಮಿ ಅವರು ಬಜೆಟ್ ಮಂಡಿಸುವುದೇ ಅನು ಮಾನ ಎಂಬ ಮಾತನ್ನು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. 

ಆದರೂ ಈ ಬಗ್ಗೆ ಹೆಚ್ಚು ತಲೆಕೆ ಡಿಸಿಕೊಳ್ಳದ ಹಣಕಾಸು ಮಂತ್ರಿಯೂ ಆಗಿ ರುವ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತಮ ಬಜೆಟ್ ಮಂಡಿಸು ವತ್ತಲೇ ತಮ್ಮ ಗಮನಹರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿ ಎಸ್ ಪಕ್ಷದ ಶಾಸಕರಲ್ಲಿ ಹೊಂದಾ ಣಿಕೆ ಇಲ್ಲ ಎಂಬುದು ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯ ನ್ನು ಅವಲೋಕಿಸಿದರೆ ಸ್ಪಷ್ಟವಾಗುತ್ತದೆ. 

ಮಿತ್ರ ಪಕ್ಷ ಕಾಂಗ್ರೆಸ್ ಶಾಸಕರ ಹೇಳಿಕೆಗಳಿಂದ ಬೇಸರ ಗೊಂಡ ಮುಖ್ಯಮಂತ್ರಿ ರಾಜೀನಾಮೆ ನೀಡು ವುದಾಗಿ ಹೇಳಿಕೆ ನೀಡಿ ನಂತರ ಅದರ ಬಗ್ಗೆ ಸಮಜಾಯಿಷಿಯನ್ನೂ ನೀಡಿದ್ದಾರೆ.

ಆದರೆ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಕೆಲ ಶಕ್ತಿಗಳು ತೆರೆಮರೆಯ ಪ್ರಯತ್ನ ಮಾಡುತ್ತಿವೆ. ಆದರೆ, ಇದಕ್ಕೆ ಜಯ ಸಿಗುವುದಿಲ್ಲ. ಅವರ ಪ್ರಯತ್ನವು ವಿಫಲವಾಗಲಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್‌ನ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹೇಳಿಕೆಗಳು ಮುಖ್ಯಮಂತ್ರಿಗಳಲ್ಲಿ ಮತ್ತಷ್ಟು ಧೈರ್ಯ ಹೆಚ್ಚಿಸಿದ್ದು, ಬಜೆಟ್ ಮಂಡನೆ ಸಿದ್ಧತೆಗೆ ಹೆಚ್ಚಿನ ಸಮಯ ವ್ಯಯಿಸುತ್ತಿದ್ದಾರೆ ಎನ್ನಲಾಗಿದೆ. ತಮ್ಮ ಸರ್ಕಾರದ ಅಸ್ತಿತ್ವದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದರೂ ಅದರ ನಡುವೆಯೇ ಮುಖ್ಯಮಂತ್ರಿಗಳು ಕಳೆದ ಹದಿನೈದು ದಿನಗಳಿಂದ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದಾರೆ.

 ಬಜೆಟ್‌ನಲ್ಲಿ ಯಾವ ಕಾರ್ಯಕ್ರಮಗಳನ್ನು ಹೊಸದಾಗಿ ಘೋಷಿಸಬೇಕು? ಮಹತ್ವಾಕಾಂಕ್ಷಿ ಯೋಜನೆಯಾಗಿರುವ ರೈತರ ಸಾಲಮನ್ನಾ ಯೋಜನೆಗೆ ಹಣ ಹೇಗೆ ಕ್ರೋಢಿಕರಿಸಬೇಕು? ಯಾವ ವಿಭಾಗಗಳ ತೆರಿಗೆ ಹೆಚ್ಚಳ ಮಾಡಿದರೆ ಜನರಿಗೆ ಹೊರೆಯಾಗುವುದಿಲ್ಲ? ತೆರಿಗೆ ಸಂಗ್ರಹ ಹೆಚ್ಚಳಗೊಳಿಸುವುದು ಹೇಗೆ ಎಂಬಿತ್ಯಾದಿ ವಿಷಯಗಳ ಕುರಿತು ಅಧಿಕಾರಿಗಳು ಹಾಗೂ ಆರ್ಥಿಕ ತಜ್ಞರೊಂದಿಗೆ ಸತತ ಸಮಾಲೋಚನೆಯಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.