Asianet Suvarna News Asianet Suvarna News

ಪಕ್ಷ ವಿರೋಧಿ ಚಟುವಟಿಕೆ; ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ,ಕೇರಳದ ಸಿಕೆ ನಾನು ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಶನಿವಾರ ಜೆಡಿಎಸ್‌ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ.

CM Ibrahim Kerala CK Nanu expelled from JDS atk Bengaluru rav
Author
First Published Dec 10, 2023, 5:07 AM IST

ಬೆಂಗಳೂರು (ಡಿ.10) : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಶನಿವಾರ ಜೆಡಿಎಸ್‌ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಈ ಹಿಂದೆ ನಡೆಸಲಾದ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ, ನಾನು, ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದೆವು. ಆದರೆ ಅದಾದ ಬಳಿಕ ಇಬ್ರಾಹಿಂ ಹಲವು ಬಾರಿ ಪಕ್ಷಕ್ಕೆ ಹಾನಿ ಮಾಡುವಂತಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಇದೀಗ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದರು.

 

'ಸಿಎಂ ಇಬ್ರಾಹಿಂಗೂ ಹಣ ಕೊಟ್ಟಿದ್ದೆ'; ಎಚ್‌ಡಿಕೆ ಹಣ ಪಡೆದಿದ್ದಾರೆ ಎಂಬ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು!

ಇನ್ನು ಜೆಡಿಎಸ್‌ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು ಇಬ್ರಾಹಿಂ ಸಂಪರ್ಕ ಮಾಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಮಾಡುವ ದುಸ್ಸಾಹಸ ಮಾಡಿದ್ದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ನಾನಿನ್ನೂ ಜೀವಂತವಾಗಿದ್ದೇನೆ. ಹೀಗಿದ್ದರೂ ಸಿ.ಕೆ.ನಾನು ಅವರ ಅಧ್ಯಕ್ಷತೆಯಲ್ಲಿ ಸಭೆ ಮಾಡಿದ್ದಾರೆ. ಹೀಗಾಗಿ ಸಿ.ಕೆ.ನಾನು ಅವರನ್ನೂ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದರು.

ಈ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್‌ ಸೇರಿದಂತೆ ಪಶ್ಚಿಮ ಬಂಗಾಳ, ಹರ್ಯಾಣ, ಪಂಜಾಬ್‌, ಜಮ್ಮು-ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ದೆಹಲಿ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು, ಶಾಸಕರು, ಕಾರ್ಯಕಾರಣಿ ಸದಸ್ಯರು ಉಪಸ್ಥಿತರಿದ್ದರು.

 

ನೂರಕ್ಕೆ ನೂರರಷ್ಟು ನನ್ನ ಮನಸು ಜೆಡಿಎಸ್‌ನಲ್ಲಿದೆ; ಇನ್ನೊಮ್ಮೆ ಮೈತ್ರಿ ಪರಿಶೀಲಿಸಿ ಗೌಡ್ರೆ: ಇಬ್ರಾಹಿಂ

Follow Us:
Download App:
  • android
  • ios