ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಬೆಂಗಳೂರು (ಡಿ.29): ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಅಧಿಕಾರಿಗಳು ಸೂಚಿಸಿದರು. ಅಲ್ಲದೇ ಈ ಹಿಂದೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದರು.
ಸಿದ್ದರಾಮಯ್ಯನವರೇ ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಎಲ್ಲಿಂತ ತರ್ತಿರಾ?: ವಿಜಯೇಂದ್ರ
ಒಟ್ಟು 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಾಡಲು ಮುಂದಾದ ಸರ್ಕಾರ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲಾಗುವುದು ಎಂದರು. ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಭರವಸೆ ನೀಡಿದರು.
ಬೆಳಗಾವಿ ಅಧಿವೇಶನ ಸಮಯದಲ್ಲಿ ಹುಬ್ಬಳ್ಳಿ ಅಲ್ಪಸಂಖ್ಯಾತರ ಸಮಾವೇಶದಲ್ಲಿ 10 ಸಾವಿರ ಕೋಟಿ ಅನುದಾನ ನೀಡೋದಾಗಿ ಘೋಷಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ. ಸಿಎಂ ಹೇಳಿಕೆಗೆ ಬಿಜೆಪಿ,ಜೆಡಿಎಸ್ಕ ಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಇದು ಒಲೈಕೆ ರಾಜಕಾರಣದ ಪರಮಾವಧಿ ಎಂದು ಟೀಕಿಸಿದ್ದರು. ಇದೀಗ ಎಲ್ಲ ವಿವಾದಗಳ ನಡುವೆಯೂ ಅಲ್ಪಸಂಖ್ಯಾತರಿಗೆ 1 ಸಾವಿರ ಕೋಟಿ ಕ್ರಿಯಾ ಯೋಜನೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.
ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ನೆರವು ಸಿಎಂ ಹೇಳಿಕೆಗೆ ಎಂಪಿ ರೇಣುಕಾಚಾರ್ಯ ಫುಲ್ ಗರಂ!
ಸಮಾವೇಶದಲ್ಲಿ ಘೋಷಣೆ ಮಾಡಿದಂತೆ ಹತ್ತು ಸಾವಿರ ಕೋಟಿ ಅನುದಾನ ಪೈಕಿ 1 ಸಾವಿರ ಕೋಟಿ ಬಿಡುಗಡೆ ಮಾಡಲು ಮುಂದಾಗಿರು ಸಿಎಂ ಸಿದ್ದರಾಮಯ್ಯ. ಇಂದು ನಡೆದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
