ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಹಾಗೂ ನಟ ಅಂಬರೀಶ್ ಅವರ ನಡುವಿನ ಸ್ನೇಹದ ಬಗ್ಗೆ ನೆನೆದು ಭಾವುಕರಾಗಿದ್ದಾರೆ. ತಮ್ಮದು ರಾಜಕಾರಣವನ್ನು ಮೀರಿದ ಸಂಬಂಧ ಎಂದು ಅವರು ಹೇಳಿದ್ದಾರೆ. 

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಅಂಬರೀಶ್ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. ಅಂಬರೀಶ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. 

ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ. ಅಂಬರೀಶ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.