ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು(ಫೆ.13): ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಇಂದು ಕೆಲವು ವ್ಯಕ್ತಿಗಳು ಶಾಸಕರ ಮನೆಯ ಸಮೀಪ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
"
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
