ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಸಭೆ ನಡೆಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಆಡಳಿತದ ಕಾರ್ಯವೈಖರಿ ಕುರಿತಂತೆ ಪರಮಾರ್ಶಿಸಲಿದ್ದಾರೆ. ಪ್ರಮುಖವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ, ಏನಾದರೂ ಲೋಪಗಳಾಗಿವೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಬೆಂಗಳೂರು(ಜ.31): ಗ್ಯಾರಂಟಿ ಯೋಜನೆಗಳ ಜಾರಿ, ಬರದಿಂದ ಜಿಲ್ಲೆಗಳಲ್ಲಿ ಎದುರಾಗಿರುವ ಸಮಸ್ಯೆಗಳು ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಲು ಎಲ್ಲ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಸಭೆ ನಡೆಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಆಡಳಿತದ ಕಾರ್ಯವೈಖರಿ ಕುರಿತಂತೆ ಪರಮಾರ್ಶಿಸಲಿದ್ದಾರೆ. ಪ್ರಮುಖವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ, ಏನಾದರೂ ಲೋಪಗಳಾಗಿವೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಅದರ ಜತೆಗೆ ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಜಿಲ್ಲಾ ಮಟ್ಟದಲ್ಲಿನ ಸಮಸ್ಯೆಗಳು, ಅವುಗಳ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಜತೆಗೆ, ಜಿಲ್ಲಾ ಮಟ್ಟದಲ್ಲಿ ಆಡಳಿತದ ವೈಖರಿ, ಸರ್ಕಾರದ ಇತರ ಕಾರ್ಯಕ್ರಮಗಳ ಅನುಷ್ಠಾನ, 2023-24ನೇ ಸಾಲಿನಲ್ಲಿ ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳು ಜಿಲ್ಲಾಮಟ್ಟದಲ್ಲಿ ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಲಾಗಿದೆ ಎಂಬುದರ ವಿವರವನ್ನೂ ಮುಖ್ಯಮಂತ್ರಿಗಳು ಪಡೆಯಲಿದ್ದಾರೆ.
ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ವಿಜಯೇಂದ್ರ
ಕೆಡಿಪಿ ಸಭೆಯ ಗುರಿಯ ಬಗ್ಗೆ ಪರಾಮರ್ಶೆ
ಈ ಹಿಂದೆ ಮುಖ್ಯಮಂತ್ರಿಗಳು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಮಾನವ ಸೂಚ್ಯಂಕ ಅಭಿವೃದ್ಧಿ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತಂತೆ ಗುರಿ ನೀಡಲಾಗಿತ್ತು. ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಟ್ಟದಲ್ಲಿ ನೀಡಲಾಗಿದ್ದ ಗುರಿ ಮುಟ್ಟಲಾಗಿದೆಯೇ ಎಂಬ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.
