ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಣೆ; 2028ರಿಂದ ಚುನಾವಣೆಯಲ್ಲಿ ಸ್ಪರ್ಧಿಸೊಲ್ಲ!
ನಾನು ಮುಂದಿನ 2028 ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ತೀರ್ಮಾನ ಮಾಡಿದ್ದೇನೆ. ಆಗ ನನಗೆ 83 ವರ್ಷವಾಗುತ್ತದೆ. ಹಾಗಾಗಿ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು (ಏ.02): ರಾಜ್ಯ ರಾಜಕಾರಣದಲ್ಲಿ ನನಗೆ ಪ್ರೀತಿಯಿಂದ ಆಶೀರ್ವಾದ ಮಾಡುತ್ತಲೇ ಬಂದಿದ್ದಾರೆ. ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ (2028ರ ವೇಳೆಗೆ) ನನಗೆ 83 ವಯಸ್ಸು ಆಗಿ ಬಿಡುತ್ತದೆ. ಹಾಗಾಗಿ, ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕೀಯ ನಿವೃತ್ತಿ ತೀರ್ಮಾನ ಮಾಡಿದ್ದೇನೆ. ನನಗೆ ಆತಂಕ ಇದ್ದರೆ ತಾನೇ ಟೆನ್ಷನ್. ನನಗೆ ಯಾವ ಆತಂಕವೂ ಇಲ್ಲ. ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ. ಅದು ಕೂಡ ನನ್ನ ಆರೋಗ್ಯದ ಗುಟ್ಟು. ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವಯಸ್ಸು ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿರಿ ನನಗೆ ಮಾತ್ರ ಗೊತ್ತಿರುತ್ತದೆ. ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದುಕೊಂಡಿದ್ದೇನೆ ಎಂದು ಹೇಳಿದರು.
ಲೋಕಸಭೆ ಚುನಾವಣೆ 2024: ಈ ಬಾರಿ ಬಿಜೆಪಿ ಗೆಲ್ಲೋದೇ 200 ಸೀಟು, ಸಿದ್ದರಾಮಯ್ಯ
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಿರುವುದು ಭಾವನಾತ್ಮಕ ಏನು ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನ ಕೇಳಿದ್ದೇನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನಮಗೆ ಬರಿ 48 ಸಾವಿರ ಲೀಡ್ ಬಂದಿತ್ತು. ಈ ಬಾರಿ ಅದನ್ನ 60 ಸಾವಿರ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಏನು ಇಲ್ಲ. ಅದು ನನ್ಮ ಸಹಜವಾದ ಮಾತುಗಳು ಅಷ್ಟೇ. ಮೈಸೂರು ಚಾಮರಾಜನಗರ ಮಾತ್ರವಲ್ಲ 28 ಕ್ಷೇತ್ರ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಕಡೆ ಭಾಗಕ್ಕೆ ಪ್ರವಾಸಕ್ಕೆ ಬರುತ್ತೇನೆ. ಬಿಜೆಪಿವರು ಬಂದರೇ ಬಡವರು ಕಾರ್ಯಕ್ರಮಗಳು ನಿಂತು ಹೋಗುತ್ತವೆ. ಹೀಗಾಗಿ, ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಲು ಹೆಚ್ಚು ಲೀಡ್ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಕರೆ ಮಾಡಿ ದೆಹಲಿಗೆ ಬುಲಾವ್ ಮಾಡಿದ ಕೇಂದ್ರ ಸಚಿವ ಅಮಿತ್ ಶಾ
ಅಮಿತ್ ಶಾ ರಾಜ್ಯ ಭೇಟಿ ವಿಚಾರ: ಅಮಿತ್ ಶಾಗೆ ಕನ್ನಡಿಗರ ಮತ ಕೇಳಲು ಯಾವ ನೈತಿಕತೆ ಇದೆ. ನಮಗೆ ಬರಗಾಲದ ಪರಿಹಾರ 5 ಪೈಸೆಯೂ ಬಂದಿಲ್ಲ. ಪರಿಹಾರ ಕೊಡದೆ ಹೇಗೆ ಬಂದು ಇಲ್ಲಿ ಮತ ಕೇಳುತ್ತಾರೆ. ಅಮಿತ್ ಶಾ ತಮ್ಮ ಮನೆಯಿಂದ ಏನು ಬರ ಪರಿಹಾರದ ಹಣ ಕೊಡುತ್ತಾರಾ? ಅದೆನ್ನು ನಮಗೆ ಭಿಕ್ಷೆನಾ? ಎಚ್.ಡಿ ಕುಮಾರಸ್ವಾಮಿ ರಾಜ್ಯಕ್ಕೆ ಪರಿಹಾರ ಕೊಡಿಸಿ ನಂತರ ಕರೆದುಕೊಂಡು ಬರಬೇಕಿತ್ತು. ಕನ್ನಡಿಗರು ಈ ಚುನಾವಣೆಯಲ್ಲಿ ಅವರಿಗೆ ಸರಿಯಾದ ಪಾಠ ಕಲಿಸುತ್ತಾರೆ. ಕುಮಾರಸ್ವಾಮಿ ಬಿಜೆಪಿ ದೊಡ್ಡ ವಕ್ತಾರ ರೀತಿ ಇದ್ದಾರೆ. ಅವರಿಗೆ ಇದನ್ನೆಲ್ಲಾ ಕೇಳಬೇಕು. ಪರಿಹಾರ ಕೊಡದನ್ನ ಕುಮಾರಸ್ವಾಮಿ ಸಮರ್ಥಿಸಿಕೊಳ್ಳುತ್ತಾರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಕೇಳಿದರು.