Asianet Suvarna News Asianet Suvarna News

ಕರ್ನಾಟಕದಲ್ಲಿ ಸೇಫ್‌ ಸಿಟಿ ಸ್ಕೀಂ ಜಾರಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಕೇಂದ್ರ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚಿಸಿದ ಸಿದ್ದರಾಮಯ್ಯ 

CM Siddaramaiah Demands Implementation of Safe City Scheme in Karnataka grg
Author
First Published Jun 29, 2024, 11:18 AM IST

ನವದೆಹಲಿ(ಜೂ.29):  ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲ ವರ್ಧನೆಗೆ ಸಂಬಂಧಿಸಿದ ಪ್ರಸ್ತಾವನೆಗಳ ಮಂಜೂರಾತಿ ಕುರಿತು ಗಮನ ಸೆಳೆದರು.

ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ಕೇಂದ್ರ ಸರ್ಕಾರ 80 ಕೋಟಿ ರೂ. ವೆಚ್ಚದಲ್ಲಿ  India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 2 ಬೆಟಾಲಿ ಯನ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ನರೇಂದ್ರ ಮೋದಿಯನ್ನು ಎದುರಿಸಲು ರಾಹುಲ್‌ ಗಾಂಧಿ ಸೂಕ್ತ ವ್ಯಕ್ತಿ: ಸಿದ್ದರಾಮಯ್ಯ

ನಿರ್ಭಯಾ ನಿಧಿಯಡಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರು.ನಂತೆ ಒಟ್ಟು 1000 ಕೋಟಿ ರು. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು, ಹೈಕೋರ್ಟ್ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ ಕ್ಯಾಮೆರಾ (Body womn camera) ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ 175 ಕೋಟಿ ರು. ವೆಚ್ಚದಲ್ಲಿ 58,546 ಕ್ಯಾಮೆರಾ(Body worn camera) ಖರೀದಿಸುವ ಅಗತ್ಯವಿದ್ದು 100 ಕೋಟಿ ರು. ನೆರವು ನೀಡುವಂತೆ ಮನವಿ ಸಲ್ಲಿಸಿದರು.

ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತೂ ಕೇಂದ್ರ ಸಚಿವರೊಂದಿಗೆ ಈ ವೇಳೆ ಚರ್ಚಿಸಲಾಯಿತು.

Latest Videos
Follow Us:
Download App:
  • android
  • ios