ಸಿಎಂ ಸಿದ್ದರಾಮಯ್ಯ ಸರ್ಕಾರದ ದಿಟ್ಟ ಹೆಜ್ಜೆ, ವಿಮಾನ ನಿಲ್ದಾಣಗಳು ಇನ್ಮುಂದೆ ರಾಜ್ಯ ಸರ್ಕಾರದ ನಿರ್ವಹಣೆಗೆ?

ವಿಮಾನ ನಿಲ್ದಾಣದ ನಿರ್ವಹಣೆ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಂಡಿರುವ ರಾಜ್ಯ ಸರಕಾರ ಅದಕ್ಕಾಗಿ ಹೊಸದೊಂದು ಲೆಕ್ಕಚಾರ ಹಾಕಿಕೊಂಡಿದೆ. 

CM siddaramaiah government plans to manage state airports under Karnataka government kannada news gow

ಬೆಂಗಳೂರು (ಜೂ.13): ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರಕ್ಕೆ ದಿಟ್ಟ ಹೆಜ್ಜೆ ಇಟ್ಟಿದೆ. ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯಿಂದ‌ ಕ್ರಾಂತಿಕಾರಕ ನಿರ್ಧಾರಕ್ಕೆ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ವಿಮಾನ ನಿಲ್ದಾಣದ ನಿರ್ವಹಣೆ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಂಡಿರುವ ರಾಜ್ಯ ಸರಕಾರ ಅದಕ್ಕಾಗಿ ಹೊಸದೊಂದು ಲೆಕ್ಕಚಾರ ಹಾಕಿಕೊಂಡಿದೆ.

ವಿಮಾನ ನಿಲ್ದಾಣ ನಿರ್ಮಾಣ ಮಾಡೋದು ರಾಜ್ಯ ಸರ್ಕಾರ ಆದರೆ ನಿರ್ಮಾಣದ ಬಳಿಕ ಅದರ ನಿರ್ವಹಣೆ Airport Authorityಗೆ  ನೀಡೋದ್ರಿಂದ ರಾಜ್ಯಕ್ಕೆ ಲಾಭ ಆಗುವುದಿಲ್ಲ. ಹೀಗಾಗಿ ರಾಜ್ಯವೇ ನಿರ್ವಹಣೆ ಮಾಡೋದ್ರಿಂದ ಆರ್ಥಿಕ ಲಾಭ ಅನ್ನೋದು ಸರ್ಕಾರದ ಲೆಕ್ಕಾಚಾರವಾಗಿದೆ.

ಕರ್ನಾಟಕದಲ್ಲಿ ಹಾದು ಹೋಗುವ ನೈರುತ್ಯ ರೈಲುಗಳ ವೇಳಾಪಟ್ಟಿ ಬದಲಾವಣೆ, ನಿಲುಗಡೆ ರದ್ದು

ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣದ ನಿರ್ವಹಣೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ರಾಯಚೂರು, ವಿಜಯಪುರ ಸೇರಿದಂತೆ ಮುಂದೆ ನಿರ್ಮಾಣ ಆಗುವ ಎಲ್ಲಾ ಏರ್ ಪೋರ್ಟ್ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವಂತೆ ಹೊಸ ನೀತಿ ಜಾರಿ ಮಾಡಲು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.

ಹೊಸ ನೀತಿ‌ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಎಂ ಬಿ ಪಾಟೀಲ್, ನಿರ್ಮಾಣ ಹಂತದಲ್ಲಿ ಇರುವ ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳನ್ನೂ ಆಪರೇಟ್ ಮಾಡುವ ಉದ್ದೇಶ ಇದೆ.  ರಾಜ್ಯದಲ್ಲಿ ಇನ್ನು‌ ಮುಂದಿನ ದಿನಗಳಲ್ಲಿ ನಿರ್ಮಿಸುವ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಣೆ ಮಾಡುವುದು ಒಳ್ಳೆಯದು. ಇದರಿಂದ ನಮಗೆ ಆರ್ಥಿಕವಾಗಿ ಲಾಭವಾಗಲಿದೆ. ಮಹಾರಾಷ್ಟ್ರದಲ್ಲಿನ ಶಿರಡಿಯಲ್ಲಿರುವ ವಿಮಾನ ನಿಲ್ದಾಣವನ್ನು ಅಲ್ಲಿನ ಸರಕಾರವೇ ನಿರ್ವಹಿಸುತ್ತಿದೆ. ಹಾಗೆಯೇ, 2-3 ರಾಜ್ಯಗಳು ಈ ಮಾದರಿಯನ್ನು ಅನುಸರಿಸುತ್ತಿವೆ. ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸಿದರೆ ಆಗುವ ಲಾಭ-ನಷ್ಟಗಳನ್ನು ಕುರಿತು ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಅ.31ರವರೆಗೆ ಕೊಂಕಣ ರೈಲು ಮಾರ್ಗದಲ್ಲಿನ ಎಲ್ಲಾ ರೈಲಿನ ವೇಳಾಪಟ್ಟಿ ಬದಲಾವಣೆ, ಯಾವೆಲ್ಲ ಜಿಲ್ಲೆಯಲ್ಲಿದೆ ಕೊಂಕಣ ರೈಲು

ಕಲಬುರಗಿಯಲ್ಲಿ ರಾಜ್ಯ ಸರಕಾರವು 1,000 ಕೋಟಿ ರೂ. ಖರ್ಚು ಮಾಡಿ ವಿಮಾನ ನಿಲ್ದಾಣ ನಿರ್ಮಿಸಿದೆ. ಆದರೆ, ಅದನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟು ಕೊಟ್ಟಿದ್ದೇವೆ. ಇದರ ಬದಲು ನಾವೇ ನಿರ್ವಹಣೆಯನ್ನು ಹೊತ್ತುಕೊಂಡರೆ ಅದರಿಂದ ಪ್ರಯೋಜನವಾಗಲಿದೆ. ಇಂತಹ ಚಿಂತನೆ ಈಗ ದೇಶದ ಹಲವು ರಾಜ್ಯಗಳಲ್ಲಿ ಮುನ್ನೆಲೆಗೆ ಬಂದಿದೆ. ಇದರಿಂದ ಸ್ಥಳೀಯವಾಗಿ ಹೆಚ್ಚು ಲಾಭವಿದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

Latest Videos
Follow Us:
Download App:
  • android
  • ios