ಮತ್ತೆರಡು ಡಿಸಿಎಂ ಹುದ್ದೆ ಸೃಷ್ಟಿಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ: ಜೋಶಿ
ರಾಜ್ಯ ಕಾಂಗ್ರೆಸ್‌ನ ಬೇಗುದಿ, ಒಳಜಗಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ನಡುವಿನ ಜಗಳ ತಾರಕಕ್ಕೇರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿಯನ್ನು ಹೊರಗಿಟ್ಟು ಸಭೆ ನಡೆಸುತ್ತಿದ್ದಾರೆ. ಮತ್ತೆ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಹುಬ್ಬಳ್ಳಿ (ಅ.30): ರಾಜ್ಯ ಕಾಂಗ್ರೆಸ್‌ನ ಬೇಗುದಿ, ಒಳಜಗಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ನಡುವಿನ ಜಗಳ ತಾರಕಕ್ಕೇರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿಯನ್ನು ಹೊರಗಿಟ್ಟು ಸಭೆ ನಡೆಸುತ್ತಿದ್ದಾರೆ. ಮತ್ತೆ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್‌ನ ಈ ಗೊಂದಲದಿಂದ ರಾಜ್ಯದ ಜನ ಅತಂತ್ರರಾಗಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೆಲ್ಲ ಸ್ಥಗಿತವಾಗಿವೆ. ಇದನ್ನು ಮರೆಮಾಚಲು ಕಾಂಗ್ರೆಸ್ಸಿಗರು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ ಎಂದು ಆರೋಪಿಸಿದರು.
ಸತೀಶ್ ಜಾರಕಿಹೊಳಿ ಭಿನ್ನಮತಕ್ಕೆ ಸಿಎಂ ಸಿದ್ದರಾಮಯ್ಯರ ಕುಮ್ಮಕ್ಕು ಇದೆ: ಪ್ರಲ್ಹಾದ್ ಜೋಶಿ
ಆಪರೇಷನ್ ಕಮಲ ಆರೋಪ ಕುರಿತು ಪ್ರತಿಕ್ರಿಯಿಸಿ, ಐದಾರು ಸ್ಥಾನಗಳು ಕಡಿಮೆ ಇದ್ದರೆ ಸರ್ಕಾರ ರಚನೆ ಬಗ್ಗೆ ಯೋಚನೆ ಮಾಡಬಹುದು. 70 ಶಾಸಕರನ್ನು ಕರೆದುಕೊಂಡು ಯಾರು ಸರ್ಕಾರ ರಚನೆ ಮಾಡಲು ಯೋಚನೆ ಮಾಡುತ್ತಾರೆ? ಇದು ಸಾಧ್ಯನಾ?. ಇನ್ನು ಎರಡೂವರೆ ವರ್ಷಕ್ಕೆ ಡಿ.ಕೆ. ಶಿವಕುಮಾರ ಅವರಿಗೆ ಅಧಿಕಾರ ಬಿಟ್ಟುಕೊಡಬೇಕು ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ಈ ರೀತಿಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅನುಮಾನ ಮೂಡುತ್ತಿದೆ:
ಕಲಬುರಗಿಯಲ್ಲಿ ನಡೆದ ಎಫ್‌ಡಿಎ ಪರೀಕ್ಷೆ ಅವ್ಯವಹಾರ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ ಹೊರಬಂದಾಗ ಐಜಿ ಅವರನ್ನೇ ಜೈಲಿಗೆ ಕಳುಹಿಸಲಾಗಿತ್ತು. ಪರೀಕ್ಷೆ ಅಕ್ರಮ ತಡೆಗಟ್ಟಲು ಸಾಕಷ್ಟು ತಂತ್ರಜ್ಞಾನವಿದ್ದರೂ, ಕಲಬುರಗಿಯಲ್ಲಿಯೇ ಅಕ್ರಮ ನಡೆದಿರುವುದು ಅನುಮಾನ ಮೂಡಿಸುತ್ತಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿಯೇ ಏಕೆ ಹಗರಣ ನಡೆಯುತ್ತಿದೆ ಎಂಬುದು ತಿಳಿಯುತ್ತಿಲ್ಲ ಎಂದರು.
ಶಾಮನೂರು ಸತ್ಯವನ್ನೇ ಹೇಳಿದ್ದಾರೆ, ರಾಜ್ಯ ಸರ್ಕಾರ ಚಿಂತಿಸಲಿ: ಜೋಶಿ