ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.
ಬೆಂಗಳೂರು (ಫೆ.1) : ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಹೇಳಿದರು.
ರಾಯಚೂರಿಗೆ ಏಮ್ಸ್ ಮಂಜೂರು ಮಾಡಲು ಕೇಂದ್ರ ಸಚಿವೆ ಸೀತಾರಾಮನ್‌ಗೆ ಪತ್ರ ಬರೆದ ಸಿಎಂ
ಅಧಿಕಾರಿಗಳ ಅನುಭವಗಳು ಸರ್ಕಾರದ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾಡಳಿತಗಳಿಗೆ ಸಹಾಯ ಮಾಡುತ್ತದೆ. ಕೆಲವು ಜಿಲ್ಲೆಗಳಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಗ್ಯಾರಂಟಿ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಇಂತಹ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು. ನಿಮ್ಮ ಮಟ್ಟದಲ್ಲಿ ಯಾವುದೇ ಸಮಸ್ಯೆ ಬಗೆಹರಿಯದಿದ್ದರೆ ಮುಖ್ಯ ಕಾರ್ಯದರ್ಶಿಗೆ ತಿಳಿಸಿ, ನಿಯಮ ಉಲ್ಲಂಘಿಸುವ ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಲಸದಲ್ಲಿ ಶಿಸ್ತು ಕಾಪಾಡಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಯಾವುದೇ ವಿಳಂಬವಿಲ್ಲದೆ ಜನರ ಕುಂದುಕೊರತೆಗಳನ್ನು ಪರಿಹರಿಸಲಾಗುತ್ತಿದೆಯೇ ಎಂಬುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಸರ್ಕಾರಿ ಶಾಲೆ, ಕಾಲೇಜು, ಹಾಸ್ಟೆಲ್, ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಮುಜರಾಯಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯವಿಲ್ಲ: ಉಲ್ಟಾ ಹೊಡೆದರೇ ಸಿಎಂ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ
5 ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ವೇಳೆ ಭರವಸೆ ನೀಡಿದರು.
ಫೆ.8ರಂದು ಜನಸ್ಪಂದನ ಕಾರ್ಯಕ್ರಮ:
ಫೆ.8ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ ಬಂದಿರುವ ಅರ್ಜಿಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು. ಅರ್ಜಿಗಳನ್ನು ತೆರವುಗೊಳಿಸಲು ವಿಫಲವಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆಯನ್ನೂ ನೀಡಿದರು.
