ಹೋರಾಟಗಾರರ ಕೇಸ್ ವಾಪಸಿಗೆ ಸಿಎಂ ಸೂಚನೆ
ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಗಾಗಿ ನಡೆದಿದ್ದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಕೈಬಿಡುವಂತೆ ಕೋರಿ ದಿನೇಶ್ ಗೂಳಿಗೌಡ ಅವರು ಇತ್ತೀಚೆಗೆ ಮುಖ್ಯಮಂತ್ರಿ ಅವರಿಗೆ ಎರಡು ಪುಟಗಳ ಸುದೀರ್ಘ ಪತ್ರ ಬರೆದಿದ್ದರು. ಈ ಮನವಿಗೆ ಮುಖ್ಯಮಂತ್ರಿಗಳು ತುರ್ತಾಗಿ ಸ್ಪಂದಿಸಿದ್ದಾರೆ.

ಬೆಂಗಳೂರು(ಅ.21): ಹೋರಾಟಗಾರರು ಹಾಗೂ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಈ ವಿಚಾರವನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ.
ಮೇಕೆದಾಟು ಹೋರಾಟದಲ್ಲಿ ಪಾಲ್ಗೊಂಡಿದ್ದವರು ಸೇರಿದಂತೆ ಹೋರಾಟಗಾರರು ಹಾಗೂ ರೈತರ ಮೇಲೆ ದುರುದ್ದೇಶದಿಂದ ಹಿಂದಿನ ಸರ್ಕಾರ ದಾಖಲಿಸಿದ್ದ ಪ್ರಕರಣಗಳನ್ನು ಕೈ ಬಿಡಬೇಕು ಎಂದು ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು.
ದೇಶದ ಐಟಿ ರಾಜಧಾನಿಗೆ ಬೆಂಗಳೂರು ಹೆಸರುವಾಸಿ: ಸಿಎಂ ಸಿದ್ದರಾಮಯ್ಯ
ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಯವರು ಗೃಹ ಸಚಿವರಿಗೆ ಈ ನಿರ್ದೇಶನ ನೀಡಿದ್ದು, ಹೋರಾಟಗಾರರು ಹಾಗೂ ರೈತರ ವಿರುದ್ಧದ ಪ್ರಕರಣಗಳ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಅಗತ್ಯ ಕ್ರಮಕ್ಕಾಗಿ ಕ್ಯಾಬಿನೆಟ್ ಮುಂದೆ ಮಂಡಿಸುವಂತೆ ತಿಳಿಸಿದ್ದಾರೆ
ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಗಾಗಿ ನಡೆದಿದ್ದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಕೈಬಿಡುವಂತೆ ಕೋರಿ ದಿನೇಶ್ ಗೂಳಿಗೌಡ ಅವರು ಇತ್ತೀಚೆಗೆ ಮುಖ್ಯಮಂತ್ರಿ ಅವರಿಗೆ ಎರಡು ಪುಟಗಳ ಸುದೀರ್ಘ ಪತ್ರ ಬರೆದಿದ್ದರು. ಈ ಮನವಿಗೆ ಮುಖ್ಯಮಂತ್ರಿಗಳು ತುರ್ತಾಗಿ ಸ್ಪಂದಿಸಿದ್ದಾರೆ.
ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಮೋದಿ, ನಾನು ಹಿಂದಿ ಮಾತಾಡಲ್ಲ ಎಂದ ಸಿಎಂ ಸಿದ್ದರಾಮಯ್ಯ
ಮನವಿಯಲ್ಲೇನಿತ್ತು?:
ನಾಡಿನ ನೆಲ-ಜಲ ಮತ್ತು ಭಾಷೆಯ ಹಿತರಕ್ಷಣೆಗಾಗಿ ಹಲವಾರು ಹೋರಾಟಗಳು ನಡೆದಿವೆ. ಕಾವೇರಿ ನೀರಿಗಾಗಿ, ಮೇಕೆದಾಟು ಹಾಗೂ ಇನ್ನಿತರೆ ವಿಷಯಗಳಿಗೆ ಸಾಕಷ್ಟು ಧರಣಿಗಳು, ಪ್ರತಿಭಟನೆಗಳು ಹಾಗೂ ಪಾದಯಾತ್ರೆಗಳು ನಡೆದಿದ್ದು, ಅಂಥ ಹೋರಾಟಗಳಲ್ಲಿ ರೈತರು, ರೈತ ಸಂಘಟನೆಗಳ ನಾಯಕರು, ಕನ್ನಡಪರ ಹೋರಾಟಗಾರರು, ಜನಪ್ರತಿನಿಧಿಗಳು, ಹಿರಿಯ ರಾಜಕಾರಣಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಅಂದಿನ ಬಿಜೆಪಿ ಸರ್ಕಾರವು ಹೋರಾಟದ ಕಿಚ್ಚನ್ನು ನಿಯಂತ್ರಿಸಲು ಹೋರಾಟಗಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಿತ್ತು. ಇದರಿಂದಾಗಿ ಹಲವಾರು ಜನ ಇಂದಿಗೂ ವಿನಾಕಾರಣ ನ್ಯಾಯಾಲಯಗಳಿಗೆ ಅಲೆದಾಡುತ್ತಿದ್ದು, ಅವರ ಕುಟುಂಬದವರು ಕೂಡ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂತಹ ಹಲವಾರು ಪ್ರಕರಣಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತಂದು ಮರು ಪರಿಶೀಲನೆ ನಡೆಸಿ ದಾಖಲಾಗಿರುವ ಪ್ರಕರಣಗಳನ್ನು ಜರೂರಾಗಿ ಕೈಬಿಡಬೇಕು ಎಂದು ದಿನೇಶ್ ಗೂಳಿಗೌಡ ಮನವಿ ಮಾಡಿದ್ದರು.