ಕಾಂಗ್ರೆಸ್‌ ಸರ್ಕಾರದ 5 ಪ್ರಮುಖ ಉಚಿತ ಭರವಸೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ ಯೋಜನೆಗೆ ಇಂದು ಚಾಲನೆ ದೊರೆಯಲಿದೆ. ಈ ವೇಳೆ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಹಿರಿಯ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಬೆಂಗಳೂರು(ಆ.05):  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್‌ ಹಂಚಿಕೆ ಆಗಸ್ಟ್‌ 1ರಿಂದಲೇ ಆರಂಭವಾಗಿದ್ದು, ಇಂದು(ಶನಿವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯ ಎನ್‌.ವಿ.ಮೈದಾನದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್‌ ಸರ್ಕಾರದ 5 ಪ್ರಮುಖ ಉಚಿತ ಭರವಸೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ ಯೋಜನೆಗೆ ಶನಿವಾರ ಚಾಲನೆ ದೊರೆಯಲಿದೆ. ಈ ವೇಳೆ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಹಿರಿಯ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಗೃಹ ಜ್ಯೋತಿ ಯೋಜನೆ ಚಾಲನೆ: ಸಿಎಂ ಕಾರ್ಯ​ಕ್ರ​ಮ​ದಲ್ಲಿ ಭದ್ರತಾ ಲೋಪ​ವಾ​ಗ​ದಿ​ರ​ಲಿ, ಪ್ರಿಯಾಂಕ್‌

ಯೋಜನೆ ಅನುಷ್ಠಾನದ ಮೊದಲ ತಿಂಗಳಿನಲ್ಲೇ 1.42 ಕೋಟಿ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಜು.27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರು ಮಾತ್ರ ಜುಲೈ ತಿಂಗಳ ವಿದ್ಯುತ್‌ ಬಳಕೆಯ ಶುಲ್ಕದಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಜು.27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್‌ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟೆಂಬರ್‌ನ ಬಿಲ್ಲಿಂಗ್‌ನಲ್ಲಿ ಪ್ರಯೋಜನ ಪಡೆಯುತ್ತಾರೆ. ಈಗಾಗಲೇ 1.42 ಕೋಟಿ ಕುಟುಂಬ ನೋಂದಣಿ ಮಾಡಿರುವುದರಿಂದ ಅವರಿಗೆ ಆ.1ರಿಂದ ಶೂನ್ಯ ಬಿಲ್‌ ವಿತರಣೆಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.