CM Siddaramaiah on RSS activities: ಪ್ರಿಯಾಂಕ ಖರ್ಗೆಗೆ ಬಂದ ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ಸರ್ಕಾರಿ ಜಾಗಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ನಿಷೇಧಿಸುವ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿರುವುದಾಗಿ ಸುಳಿವು ನೀಡಿದ್ದಾರೆ.
ಮೈಸೂರು (ಅ.15): ದುಷ್ಟ ಶಕ್ತಿಗಳು ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಇಂಥ ಬೆದರಿಕೆಗಳಿಗೆ ಅವರು ಜಗ್ಗಲ್ಲ, ನಾವೂ ಜಗ್ಗಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆರೆಸ್ಸೆಸ್ ಚಟುವಟಿಕೆಗಳನ್ನು ಸರ್ಕಾರಿ ಜಾಗದಲ್ಲಿ ನಿಷೇಧಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದರು.
ಮೈಸೂರಿನಲ್ಲಿ ನಡೆದ ಬೌದ್ಧ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಆರೆಸ್ಸೆಸ್ ಚಟುವಟಿಕೆ ನಿಷೇಧ ಕುರಿತಾಗಿ ಪ್ರಿಯಾಂಕ ಖರ್ಗೆ ಪತ್ರ ಬರೆದಿರುವುದರಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರ ಅವರು, ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಡೆಸುವುದು ನಿಷೇಧ ಮಾಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಜಾರಿಗೆ ತನ್ನಿ ಎಂದು ಹೇಳಿದ್ದಾರೆ ಇದರಲ್ಲೇನು ತಪ್ಪಿದೆ. ನಾವು ಪ್ರಿಯಾಂಕ್ ಖರ್ಗೆ ಅವರ ಪತ್ರವನ್ನು ಗಂಭಿರವಾಗಿ ಪರಿಗಣಿಸಿದ್ದೇವೆ. ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧಿಸಿರುವ ಆದೇಶದ ಸಂಪೂರ್ಣ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಇದನ್ನು ಗಮನಿಸುವಂತೆ ಸೂಚಿಸಿದ್ದೇನೆ. ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸುಳಿವು ನೀಡಿದರು.
ಇದನ್ನೂ ಓದಿ: ಭಾರತದಲ್ಲಿ ಬೌದ್ಧ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ: ಸತೀಶ್ ಜಾರಕಿಹೊಳಿ ಕಿಡಿ
ಬಿಜೆಪಿಯವ್ರು ಯಾವಾಗಲೂ ಧಮ್ಮಿದ್ರೆ ಬ್ಯಾನ್ ಮಾಡಿ ಅಂತಾರೆ:
ಬಿಜೆಪಿ ಯಾವಾಗಲೂ 'ಧಮ್ಮಿದ್ರೆ ಬ್ಯಾನ್ ಮಾಡಿ, ಧಮ್ಮಿದ್ರೆ ಬನ್ನಿ' ಅಂತಾರೆ. ಕಳೆದ ಚುನಾವಣೆಯಲ್ಲಿ ಅದೇ ರೀತಿ ಕರೆದಿದ್ದರು. ಅವರ ಸ್ಥಿತಿ ಏನಾಯ್ತು ಗೊತ್ತಲ್ಲ? ಎನ್ನುವ ಮೂಲಕ ರಾಜ್ಯದಲ್ಲಿ ಆರೆಸ್ಸೆಸ್ ಚಟುವಟಿಕೆಗೆ ನಿಷೇಧಿಸುವ ಬಗ್ಗೆ ಸುಳಿವು ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆ ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಆರೆಸ್ಸೆಸ್ ಚಟುವಟಿಕೆಗೆ ನಿಷೇಧ ಹೇರುವ ಈ ನಿರ್ಧಾರಕ್ಕೆ ಸರ್ಕಾರ ಬಂದರೆ, ಕರ್ನಾಟಕದಲ್ಲಿ RSSನ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಬಹುದು
ಬೌದ್ಧ ಮಹಾ ಸಮ್ಮೇಳನದ ಹಿನ್ನೆಲೆ: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಬೌದ್ಧ ಮಹಾ ಸಮ್ಮೇಳನ ನಡೆದಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕಾರ ಮಾಡಿ 70 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಇದನ್ನು ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವವಪ್ಪ, ಸತೀಶ್ ಜಾರಕಿಹೊಳಿ ಇತರರು ಭಾಗಿಯಾಗಿದರು.
