Asianet Suvarna News Asianet Suvarna News

ಕರ್ನಾಟಕದ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ: ಪ್ರಬಲ ಸಮುದಾಯಗಳಿಂದ ವಿರೋಧ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಜಾತಿಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಇಲಾಖೆಯಿಂದ ಸ್ವೀಕಾರ ಮಾಡಿದ್ದಾರೆ.

CM Siddaramaiah received Karnataka caste census report but some communities are opposed sat
Author
First Published Nov 21, 2023, 7:21 PM IST

ಬೆಂಗಳೂರು (ನ.21): ಕರ್ನಾಟಕ ರಾಜ್ಯದಲ್ಲಿ 2013ರಲ್ಲಿ ಅಧಿಕಾರಕ್ಕೆ ಬಂದಿದ್ದ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅವಧಿಯಲ್ಲಿಯೇ ಜಾತಿಗಣತಿಯನ್ನು (ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ)ಮಾಡಿಸಿದ್ದರು. ಆದರೆ, ಕೆಲವು ಪ್ರಭಲ ಸಮುದಾಯಗಳು ಜಾತಿಗಣತಿ ವರದಿ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಪುನಃ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 6 ತಿಂಗಳಲ್ಲಿ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದಾರೆ.

ಜಾತಿಗಣತಿ ವರದಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿfದರಾಮಯ್ಯ ಅವರು ತಮ್ಮ ಅಧಿಕೃತ ಜಾಲತಾಣದ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. "ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ "ಸರ್ವರಿಗೂ ಸಮಪಾಲು - ಸರ್ವರಿಗೂ ಸಮಬಾಳು" ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ'.

ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಬರಲಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ: ಭಜರಂಗಿಗೆ ಸಾಥ್ ಕೊಡ್ತಾಳೆ ತೆನೆಹೊತ್ತ ಮಹಿಳೆ

'ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ' ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ. ಜೊತೆಗೆ, ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿಗೆ ಟ್ಯಾಗ್‌ ಮಾಡಿದ್ದಾರೆ. ಈ ಮೂಲಕ ರಾಜಸ್ಥಾನದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಿಸುವುದಾಗಿ ಭರವಸೆ ನೀಡುವುದಕ್ಕೆ ಸಿಎಂ ಸಿದ್ದರಾಮಯ್ಯ ನೆರವಾಗಿದ್ದಾರೆ. ಮತ್ತೊಂದೆಡೆ ಲೋಕಸಭಾ ಚುನಾವನೆಗೂ ಮುನ್ನ ಜಾತಿಗಣತಿ ವರದಿ ಬಿಡುಗಡೆ ಮಾಡಿದಲ್ಲಿ ಮತಗಳನ್ನು ಸೆಳೆಯುವ ತಂತ್ರವೂ ಕೂಡ ಅಡಗಿದೆ.

ರಾಹುಲ್‌ಗಾಂಧಿ ಕೋಟ್ ಹಾಕಿ ಸ್ಥಳೀಯ ಪ್ರಬಲ ಸಮುದಾಯ ನಾಯಕರ ಬಾಯಿ ಮುಚ್ಚಿಸಿದ ಸಿಎಂ ಸಿದ್ದರಾಮಯ್ಯ:ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸ ಜಾತಿಗಣತಿ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿದೆ. ಜಾತಿಗಣತಿ ನಡೆಸಿದಾಗಲೇ ಭಾರತ ಮಾತೆಗೆ ಜಯ' ಎಂದ ರಾಹುಲ್‌ಗಾಂಧಿ ಹೇಳಿರುವುದನ್ನು ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್‌ ಪೋಸ್ಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಈ ಮೂಲಕ ಸ್ವಪಕ್ಷೀಯ ಪ್ರಬಲ ಸಮುದಾಯದ ನಾಯಕರು ಜಾತಿಗಣತಿಗೆ ವಿರೋಧ ವ್ಯಕ್ತಪಡಿಸುವುದನ್ನು ತಡೆದಿದ್ದಾರೆ. 

ಮನೆಯಲ್ಲಿ ಕೂತು ಸಮೀಕ್ಷೆ ಮಾಡಲಾಗಿದೆ ಎಂದಿದ್ದ ಶಾಮನೂರು ಶಿವಶಂಕರಪ್ಪ: ಕೆಲವು ದಿನಗಳ ಹಿಂದೆ ಜಾತಿಗಣತಿ ವರದಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕಾಂಗ್ರೆಸ್‌ ಶಾಸಕರೂ ಆಗಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ನಮ್ಮದೇ ಸರ್ಕಾರದ ವರದಿಯನ್ನ ಮನೆಯಲ್ಲೇ ಕೂತು ಬರೆದಿದ್ದಾರೆ. ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಸರ್ವೇ ನಡೆಸಿಲ್ಲ ಎಂದು ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿ ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿದರು. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಈ ಜಾತಿಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿಯನ್ನು ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಬಂದಿದೆ ಹೀಗಾಗಿ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡುವಂತೆ ಒತ್ತಾಯಿಸಿದರು. 

'ಜಾತಿ ಗಣತಿ ವರದಿ ಬಹಿರಂಗದಿಂದ ರಾಜಕೀಯ ಸ್ಥಿತ್ಯಂತರ'

ಈ ಜಾತಿ ಗಣತಿ ವರದಿ ಈಗಾಗಲೇ 8 ವರ್ಷದಷ್ಟು ಹಳೆಯದಾಗಿದೆ. ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಹೀಗಾಗಿ ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ನಾವು ಯಾರೂ ಸಿಎಂ ಭೇಟಿಗೆ ಹೋಗಲ್ಲ. ಅವರೇ ಈ ಬಗ್ಗೆ ಅರ್ಥ ಮಾಡಿಕೊಳ್ಲಬೇಕು ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದರು. ಇನ್ನು ಒಕ್ಕಲಿಗ ಸಮುದಾಯದಿಂದಲೂ ಜಾತಿಗಣತಿ ವರದಿಗೆ ಭಾರಿ ವಿರೋಧ ವ್ಯಕ್ತವಾಗಿದೆ. 

Follow Us:
Download App:
  • android
  • ios