ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

ಜಾತಿಗಣತಿ ವರದಿಯನ್ನು 2 ಬೃಹತ್ ಮೂಟೆಗಳಲ್ಲಿ ವಿಧಾನಸೌಧಕ್ಕೆ ತಂದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು.

 

CM Siddaramaiah received Karnataka caste census report from Jayaprakash hegde sat

ಬೆಂಗಳೂರು (ಫೆ.29): ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿ 2024)ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕಾರ ಮಾಡಿದ್ದಾರೆ.

ಇನ್ನು ಎರಡು ಬೃಹತ್ ಮೂಟೆಗಳಲ್ಲಿ ಜಾತಿ ಗಣತಿ ವರದಿಗಳ ಪ್ರತಿಯನ್ನು ವಿಧಾನಸೌಧಕ್ಕೆ ತರಲಾಗಿದ್ದು, ಅವುಗಳನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು.

ಜಾತಿ ಗಣತಿ ವರದಿಯಲ್ಲಿ ಏನೇನಿದೆ?
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ಅವ್ನಲ್ಲಾ.. ಅವ್ನಲ್ಲಾ.. ಇಲ್ಲಿದ್ದಾನೆ ನೋಡಿ, ಪಾಕ್ ಪರ ಘೋಷಣೆ ಕೂಗಿದ ಆರೋಪಿ; ಬಿಜೆಪಿ ಆರೋಪ

ಜಾತಿಗಣತಿ ವರದಿ ಒಳಗೊಂಡ ಅಂಶಗಳು:

  • 1) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 ಸಮಗ್ರ ರಾಜ್ಯ ವರದಿ 
  • 2) ಜಾತಿವಾರು ಜನಸಂಖ್ಯೆ ವಿವರ - 1 ಸಂಪುಟ
  • 3) ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ) 8 ಸಂಪುಟಗಳು
  • 4) ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು) -1 ಸಂಪುಟ
  • 5) ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು) - 1 ಸಂಪುಟ
  • 6) ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (02 ಸಿಡಿಗಳು)
  • 7) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿ- 2024

1.60 ಲಕ್ಷ ಸಿಬ್ಬಂದಿಯಿಂದ ಜಾತಿಗಣತಿ ವರದಿ ದತ್ತಾಂಶ ಸಂಗ್ರಹ:
ಜಾತಿ ಗಣತಿ ವರದಿ ಸಲ್ಲಿಕೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು, 2014-15ರಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಿಕ್ಷಕರು, ಅಧಿಕಾರಿಗಳು ದತ್ತಾಂಶ ವರದಿ ತಯಾರಿಸಿದ್ದಾರೆ. ಈ ಹಿಂದೆ ಕಾಂತರಾಜ್ ವರದಿ ಸಲ್ಲಿಕೆ ಮಾಡಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಸಲ್ಲಿಕೆ‌ ಆಗಲಿಲ್ಲ. ಇದೀಗ ನಾವು ವರದಿ ಸಲ್ಲಿಕೆ ಮಾಡಿದ್ದೇವೆ. ಇನ್ನು ಜಾತಿಗಣತಿ ವರದಿ ಸೋರಿಕೆಯಾಗಿದೆ ಎಂಬ ಆರೋಪ ಸುಳ್ಳು. ಇಡೀ ವರದಿ ಹೇಗೆ ಸೋರಿಕೆ ಆಗುತ್ತದೆ. ಆದರೆ, ಕೆಲವು ಅಂಶಗಳು ಮಾತ್ರ ಸೋರಿಕೆ ಆಗಿರಬಹುದು. ರಾಜ್ಯದಾದ್ಯಂತ 1.33 ಶಿಕ್ಷಕರು ಹಾಗೂ ಉಳಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿ ಒಟ್ಟು 1.60 ಲಕ್ಷ ಸಿಬ್ಬಂದಿ ಜಾತಿಗಣತಿ ವರದಿಯ ದತ್ತಾಂಶ ಸಂಗ್ರಹ ಮಾಡಿದ್ದಾರೆ ಎಂದು ಹೇಳಿದರು.

ಪುತ್ತಿಲ ಪರಿವಾರಕ್ಕೆ ಸೆಡ್ಡು; ಮತ್ತೆ ಭಾರಿ ಅಂತರದಿಂದ ಗೆಲ್ಲುತ್ತೇನೆಂದ ಸಂಸದ ನಳಿನ್ ಕುಮಾರ್ ಕಟೀಲ್!

154 ಕೋಟಿ ರೂ. ವೆಚ್ಚದಲ್ಲಿ ವರದಿ ತಯಾರಿಕೆ: ಬರೋಬ್ಬರಿ 154 ಕೋಟಿ ರೂ. ವೆಚ್ಚದಲ್ಲಿ ಈ ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಲಾಗಿದೆ. ಕಾಂಗ್ರೆಸ್‌ ಸ್ವಪಕ್ಷೀಯ ನಾಯಕರು ಹಾಗೂ ಬಿಜೆಪಿ ನಾಯಕರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಿದ್ದಾರೆ. ಈಗಾಗಲೇ ಒಕ್ಕಲಿಗರು ಹಾಗೂ ವೀರಶೈವ ಲಿಂಗಾಯತ ಸಮುದಾಯ ಸೇರಿದಂತೆ ಹಲವು ಸಮುದಾಯಗಳಿಂದ ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿತ್ತು. ಎಲ್ಲರ ವಿರೋಧದ ನಡುವೆಯೂ ವರದಿ ಸ್ವೀಕಾರ ಮಾಡಿದ್ದು, ಅದನ್ನು ಜಾರಿ ಮಾಡುವುದು ದೊಡ್ಡ ಸವಾಲಾಗಿ ಪರಿಣಮಿಸಲಿದೆ. ಆದರೆ, ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಗೂ ಮುನ್ನ ವರದಿ ಸ್ವೀಕಾರ ಮಾಡಿ ಕೆಳ ಹಂತದ ವರ್ಗಗಗಳ ಮತ ಓಲೈಕೆ ಮಾಡುವುದಕ್ಕೆ ಮುಂದಾಗಿದ್ದಾರೆ ಎಂಬ ಆರೋಪಗಳೂ ಕೇಳಿ ಬರುತ್ತಿವೆ.

Latest Videos
Follow Us:
Download App:
  • android
  • ios