Asianet Suvarna News Asianet Suvarna News

ದುಡ್ಡು ಇರೋರು ದೇವಸ್ಥಾನ ಕಟ್ಟಿಸ್ತಾರೆ, ಇಲ್ಲದವರು ಇದ್ದಲ್ಲೇ ಪೂಜೆ ಮಾಡ್ತಾರೆ: ಸಿಎಂ

ದುಡ್ಡು ಇರೋರು ದೇವಸ್ಥಾನ ಕಟ್ಟಿಸುತ್ತಾರೆ. ಇಲ್ಲದವರು ತಾವು ಇರುವಲ್ಲಿಯೇ ದೇವರಿಗೆ ಪೂಜೆ ಮಾಡ್ತಾರೆ. ಸತ್ಯವೇ ದೇವರು ಸತ್ಯವನ್ನೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

CM Siddaramaiah released the novel 'Mangalavadya' written by Dr  MS Muthuraj at bengaluru rav
Author
First Published Jan 9, 2024, 8:28 PM IST

ಬೆಂಗಳೂರು (ಜ.9): ದುಡ್ಡು ಇರೋರು ದೇವಸ್ಥಾನ ಕಟ್ಟಿಸುತ್ತಾರೆ. ಇಲ್ಲದವರು ತಾವು ಇರುವಲ್ಲಿಯೇ ದೇವರಿಗೆ ಪೂಜೆ ಮಾಡ್ತಾರೆ. ಸತ್ಯವೇ ದೇವರು ಸತ್ಯವನ್ನೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಇಂದು ಸವಿತಾ ಸಮಾಜ ಆಯೋಜಿಸಿದ್ದ ಲೇಖಕ ಡಾ.ಎಂ.ಎಸ್ ಮುತ್ತುರಾಜ್ ಅವರ 'ಮಂಗಳವಾದ್ಯ' ಕಾದಂಬರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದೇವರು ಇಲ್ಲ ಅಂತಾ ನಾನು ಹೇಳಲ್ಲ, ಇದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಅಲ್ಲ, ಎಲ್ಲೆಡೆ ಇದ್ದಾನೆ. ನೀವು ಎಲ್ಲಿದ್ದೀರೋ ಅಲ್ಲೇ ಪೂಜೆ ಮಾಡಿ ಎಂದರು. ಇದೇ ವೇಳೆ 'ಎನ್ನ ಕಾಲೇ ಕಂಬ, ಎನ್ನ ದೇಹವೇ ದೇಗುಲ, ಹೊನ್ನ ಶಿರವೇ ಕಳಸವಯ್ಯ' ಎಂಬ ಬಸವಣ್ಣನವರ ವಚನ ಹೇಳಿದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಇದೇ ಕಾರಣಕ್ಕೆ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು "ಸರ್ವ ಜನಾಂಗದ ಶಾಂತಿಯ ತೋಟ"  ಎಂದು ಕರೆದಿದ್ದಾರೆ. 

 

ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗ ವಿರೋಧಿ ಸರ್ಕಾರವೆಂದ ಸಿಎಂ ಸಿದ್ದರಾಮಯ್ಯ

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ. 

ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಬೇಕು.  ದೇವರಿದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, "ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ" ಎಂದಿದ್ದಾರೆ. 

ಯಶ್ ಅಭಿಮಾನಿಗಳ ದುರ್ಮರಣ: 2 ಲಕ್ಷ ಪರಿಹಾರ ಹಣ ಸಾಲಲ್ಲ, 2 ಎಕರೆ ಜಮೀನು, ಯುವಕರ ಪುತ್ಥಳಿ ನಿರ್ಮಾಣಕ್ಕೆ ಗ್ರಾಮಸ್ಥರು ಆಗ್ರಹ

ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡುತ್ತೇನೆ. ನಾವು ರೂಪಿಸುವ ಕಾರ್ಯಕ್ರಮಗಳು ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜೊತೆಗಿದ್ದಾರೆ.

Follow Us:
Download App:
  • android
  • ios