ನಾಡಿನ ಕಲೆ, ಸಂಸ್ಕೃತಿಯನ್ನ ದಸರಾ ಮೂಲಕ ಜಗತ್ತಿಗೆ ತಿಳಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತೆ: ಸಿದ್ದರಾಮಯ್ಯ
ನಾನು ಚಿಕ್ಕವನಿದ್ದಾಗ ನಮ್ಮ ಅಪ್ಪ ದಸರಾಕ್ಕೆ ಕರೆದುಕೊಂಡು ಬಂದಿದ್ದ. ನಾನು ಅಪ್ಪನ ಹೆಗಲ ಮೇಲೆ ಕೂತು ಮೈಸೂರು ದಸರಾ ನೋಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಹಬ್ಬದ ಬಾಲ್ಯದ ನಂಟು ಸ್ಮರಿಸಿಕೊಂಡರು.
ಮೈಸೂರು (ಅ.15): ನಾನು ಚಿಕ್ಕವನಿದ್ದಾಗ ನಮ್ಮ ಅಪ್ಪ ದಸರಾಕ್ಕೆ ಕರೆದುಕೊಂಡು ಬಂದಿದ್ದ. ನಾನು ಅಪ್ಪನ ಹೆಗಲ ಮೇಲೆ ಕೂತು ಮೈಸೂರು ದಸರಾ ನೋಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಹಬ್ಬದ ಬಾಲ್ಯದ ನಂಟು ಸ್ಮರಿಸಿಕೊಂಡರು.
ಇಂದು ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಅಪ್ಪನ ಹೆಗಲ ಮೇಲೆ ಕೂತು ದಸರಾ ನೋಡುತ್ತಿದ್ದೆ. ಆಗ ನನಗೆ ಐದಾರು ವರ್ಷ ಇದ್ದಿರಬಹುದು. ನೋಡು ನೋಡು ಅಗೋ ಮೈಸೂರು ಮಹಾರಾಜ ಕಾಣ್ತಿದ್ದಾರೆ ಅಂತಿದ್ರು. ನನಗೆ ಕಾಣದೇ ಇದ್ರೂ ಅಪ್ಪ ತೋರಿಸಿದ ಕಡೆ ನಮಸ್ಕಾರ ಮಾಡ್ತಿದ್ದೆ. ಮುಂದೆ ಓದಲು ಮೈಸೂರಿಗೆ ಬಂದಾಗ ಪ್ರತಿ ದಸರಾದಲ್ಲೂ ತಪ್ಪದೇ ವಸ್ತು ಪ್ರದರ್ಶನಕ್ಕೆ ಹೋಗ್ತಿದ್ದೆ ಎಂದರು.
ಕರ್ನಾಟಕದಲ್ಲಿ ಕನ್ನಡ ಬಾರದವರ ಬಗ್ಗೆ ಸಮೀಕ್ಷೆ ಮಾಡಿ: ಮೈಸೂರು ದಸರಾ ಉದ್ಘಾಟಕ ಹಂಸಲೇಖ ಮನವಿ
ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ. ಕಲೆ, ಸಂಸ್ಕೃತಿಯನ್ನು ದೇಶಕ್ಕೆ ತಿಳಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ. ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಕಲೆ, ಸಂಸ್ಕೃತಿ, ಸಂಪ್ರದಾಯ ನಮ್ಮ ನಾಡಿನಲ್ಲಿ ಶ್ರೀಮಂತವಾಗಿದೆ. ಕರ್ನಾಟಕ ಜನ ಸುಸಂಸ್ಕೃತ ಜನ. ನಮ್ಮಲ್ಲಿ ಪ್ರೀತಿ, ವಿಶ್ವಾಸ ಹೆಚ್ಚಿದೆ. ಪರಸ್ಪರ ಪ್ರೀತಿ, ವಿಶ್ವಾಸ, ಗೌರವದಿಂದ ಬದುಕುವುದು ಮುಖ್ಯ. ದೇಶ ಮತ್ತು ರಾಜ್ಯಕ್ಕೆ ಇದು ತುಂಬಾ ಅಗತ್ಯ ಎಂದರು.