Asianet Suvarna News Asianet Suvarna News

ರೈತರಿಗೆ ಗುಡ್‌ ನ್ಯೂಸ್‌: ಬಿಜೆಪಿ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆಗೆ ಮುಂದಾದ ಸರ್ಕಾರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ರೈತ ವಿರೋಧಿ ಕಾಯ್ದೆಗಳನ್ನು ಮರು ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

CM Siddaramaiah said that Karnataka BJP government anti farmer laws will be reviewed sat
Author
First Published Jun 7, 2023, 7:04 PM IST

ಬೆಂಗಳೂರು (ಜೂ.07): ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಹೊಸ ಕಾಯ್ದೆಗಳು ಹಾಗೂ ಕೆಲವು ರೈತರಿಗೆ ವಿರೋಧಿ ಕಾಯ್ದೆಗಳನ್ನು ಮರು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಿಗೆ ಭರವಸೆ ನೀಡಿದರು.

ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬಡಗಲಾಪುರ ನಾಗೇಂದ್ರ ನೇತೃತ್ವದ ರೈತ ಮುಖಂಡರ ನಿಯೋಗದಿಂದ ಸಿಎಂ ಭೇಟಿ ಮಾಡಿತು. ಈ ನಿಯೋಗದಲ್ಲಿ ರೈತ ಮುಖಂಡರಾದ ಚಾಮರಸ ಮಾಲಿ ಪಾಟೀಲ್, ಜಿ.ಸಿ.ಬೈಯ್ಯಾರೆಡ್ಡಿ ಹಲವರಿದ್ದರು. ಈ ವೇಳೆ ರೈತ ಮುಖಂಡರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ಆಗ್ರಹ ಮಾಡಿದರು. ಆದರೆ, ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.

ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಕಂಡಿಷನ್‌ ಹಾಕಿದ ಕಾಂಗ್ರೆಸ್

ಕೇಂದ್ರ ಸರ್ಕಾರವು ಕಾರ್ಪೊರೇಟ್‌ ಕೃಷಿಯನ್ನು ಪರಿಚಯಿಸುವುದರಿಂದ ಶೇ. 85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ರೈತ ಮುಖಂಡರು ಮುಖ್ಯಮಂತ್ರಿ ಎದರು ಆತಂಕ ವ್ಯಕ್ತಪಡಿಸಿದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ, ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜಿ.ಸು.ಬೈಯ್ಯಾ ರೆಡ್ಡಿ , ಎಚ್.ಆರ್.ಬಸವರಾಜಪ್ಪ ಸೇರಿದಂತೆ ಹಲವಾರು ಮುಖಂಡರು ನಿಯೋಗದಲ್ಲಿದ್ದರು. ಜೊತೆಗೆ, ರೈತ ಮುಖಂಡರ ನಿಯೋಗದ ಸಭೆಯಲ್ಲಿ ಜಾನುವಾರು ಹತ್ಯೆ ಕಾಯ್ದೆ ಮರುಪರಿಶೀಲನೆ ನಡೆಸೋದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಹೇಳಿದರು.

ಶೋಷಿತ ಸಮುದಾಯಗಳಿಂದ ಸಿದ್ದರಾಮಯ್ಯ ಭೇಟಿ: ಮತ್ತೊಂದೆಡೆ ರಾಜ್ಯದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದ ಸದಸ್ಯರಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು. ಸುಮಾರು 80 ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಪ್ರತಿನಿಧಿಗಳು ಹಾಗೂ 60 ಕ್ಕೂ ಹೆಚ್ಚು ದಲಿತ ಜಾತಿ-ಸಮುದಾಯಗಳ ಮುಖಂಡರಿಂದ ಭೇಟಿ ಮಾಡಲಾಯಿತು. ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಜನಗಣತಿ) ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. 

ಮುಸ್ಲಿಂ ಹುಡುಗಿ ಜೊತೆಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ: ಫ್ರೆಂಡ್ಸ್‌ ಅಂದ್ರೂ ಬಿಡ್ಲಿಲ್ಲ

ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (preferential treatment) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯವಿತ್ತು. ಮುಂದಿನ ದಿನಗಳಲ್ಲಿ ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಂಯ್ಯ ಹೇಳಿದರು.

ಈ ವೇಳೆ ಕರ್ನಾಟಕ ಶೋಷಿತ ವರ್ಗಗಳ ಮಹಾ ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು.

Follow Us:
Download App:
  • android
  • ios