ವಿಪರೀತ ಕೆಮ್ಮಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ: ಬಹುತೇಕ ಕಾರ್ಯಕ್ರಮ ರದ್ದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಮ್ಮಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಶನಿವಾರದ ಬಹುತೇಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಬೆಂಗಳೂರು (ಜು.08): ರಾಜ್ಯದ ಬಜೆಟ್ ಮಂಡನೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಮ್ಮಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಶನಿವಾರದ ಎಲ್ಲ ಕಾರ್ಯಕ್ರಮಗಳಲ್ಲಿ ಕೆಲವು ರದ್ದುಗೊಸಿದರೆ, ಮತ್ತೆ ಕೆಲವು ಕಾರ್ಯಕ್ರಮಗಳ ಪಟ್ಟಿಯನ್ನು ಬದಲು ಮಾಡಿಕೊಂಡಿದ್ದಾರೆ.
ವಿಧಾನಸೌಧದ ಅಧಿವೇಶನದಲ್ಲಿ ಶುಕ್ರವಾರ ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿದೆ. ಈ ಕೆಮ್ಮಿನ ಕಾರಣಕ್ಕಾಗಿ ಇಂದಿನ ಕಾರ್ಯಕ್ರಮಗಳಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ, ಬಜೆಟ್ ಮಂಡನೆ ಬಳಿಕ ಸಿಎಂ ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಶನಿವಾರ ಆಯೋಜನೆ ಮಾಡಲಾಗಿದ್ದ ಬಹುತೇಕ ಕಾರ್ಯಕ್ರಮ ರದ್ದುಪಡಿಸಿಕೊಂಡಿದ್ದಾರೆ.
ಪ್ರದೀಪ್ ಈಶ್ವರ್ ಸವಾಲು: ಕೋವಿಡ್ ವೇಳೆ ಭ್ರಷ್ಟಾಚಾರ ಮಾಡಿಲ್ಲ ಅಂತ ಸುಧಾಕರ್ ದೀಪ ಹಚ್ಚಲಿ
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಸರ್ಕಾರಿ ಅಧಿಕಾರಿಗಳು ಆಗಮಿಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಐಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಮುಖ್ಯಸ್ಥ ಶರತ್ ಚಂದ್ರ ಸೇರಿದಂತೆ ಹಲವು ಅಧಿಕಾರಿಗಳ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾರೆ. ಇಂದು ಮುಖ್ಯಮಂತ್ರಿ ಜೊತೆಗೆ ಗ್ಯಾರಂಟಿ ಯೋಜನೆಗಳ ಜಾರಿ ಕುರಿತು ಹಲವು ಮಹತ್ವದ ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಕುರಿತು ಚರ್ಚೆ: ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಅಧಿಕಾರಿಗಳು ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿ ಆಗಸ್ಟ್ 15ರಂದು ಅಥವಾ ಅದರ ಮರುದಿನ ಎಲ್ಲ ಫಲಾನುಭವಿ ಮಹಿಳೆಯರಿಗೆ 2,000 ಹಣ ವರ್ಗಾವಣೆ ಮಾಡುವ ಬಗ್ಗೆ ಚರ್ಚೆ ಮಾಡಲಿದ್ದಾರೆ. ಉಳಿದಂತೆ ಅನ್ನಭಾಗ್ಯ ಯೋಜನೆಗೆ 5 ಕೆ.ಜಿ. ಅಕ್ಕಿ ಹಾಗೂ 5 ಕೆ.ಜಿ ಅಕ್ಕಿಯ ಬದಲಾಗಿ ತಲಾ 34 ರೂ.ನಂತೆ ಒಟ್ಟು 170 ರೂ. ಹಣವನ್ನು ನೀಡಲು ಸರ್ಕಾರ ಆದೇಶ ಹೊರಡಿಸಿದ್ದು, ಹಣ ಹಂಚಿಕೆ ಬಗ್ಗೆಯೂ ಅಂತಿಮ ಚರ್ಚೆ ಮಾಡಲಾಗುತ್ತಿದೆ.
ಅನ್ನಭಾಗ್ಯಕ್ಕೆ ಸಿಎಂ ನಿವಾಸದಲ್ಲೇ ಧ್ವನಿಮುದ್ರಣ: ಇನ್ನು ರಾಜ್ಯದ ಪ್ರತಿಷ್ಠಿತ ಸರ್ಕಾರಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ (ಎಲ್ಲ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ತಲಾ 10 ಕೆ.ಜಿ. ಅಕ್ಕಿ ವಿತರಣೆ) ಬಗ್ಗೆ ಧ್ವನಿ ಮುದ್ರಣ ಮಾಡಲಾಗುತ್ತಿದೆ. ಇನ್ನು ಕೆಮ್ಮಿನ ಕಾರಣ ದೀರ್ಘವಾಗಿ ಮಾತನಾಡಲು ಸಾಧ್ಯವಿಲ್ಲವೆಂದು ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ಆದರೆ, ಅನ್ನಭಾಗ್ಯ ಯೋಜನೆ ಬಗ್ಗೆ ಧ್ವನಿಮುದ್ರಣ ಮಾಡಲಿದ್ದಾರೆ. ಸಿಎಂ ನಿವಾಸದಲ್ಲೇ ರೆಕಾರ್ಡಿಂಗ್ ನಡೆಸಲಾಗುತ್ತಿದೆ.
ಬಿಜೆಪಿ ಸರ್ಕಾರದ 17 ಯೋಜನೆಗೆ ಸಿದ್ದರಾಮಯ್ಯ ಬಜೆಟ್ ಕೊಕ್: ಎಪಿಎಂಸಿ ಕಾಯ್ದೆ ರದ್ದು
ಹಾಲಿನ ದರ ಹೆಚ್ಚಳದ ಚರ್ಚೆ: ಇನ್ನು ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡುವಂತೆ ಈಗಾಗಲೇ ಎಲ್ಲ ಒಕ್ಕೂಟಗಳಿಂದಲೂ ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಪ್ರಸ್ತುತ ಇರುವ ಹಾಲಿನ ದರಕ್ಕಿಂತ ಕನಿಷ್ಠ 5 ರೂ. ಹಾಲಿನ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿವೆ. ಈ ಹಿನ್ನೆಲೆಯಲ್ಲಿ ಕೆಂಎಫ್ ಅಧ್ಯಕ್ಷಾರದ ತಕ್ಷಣವೇ ಹಾಲಿನ ದರ ಏರಿಕೆ ಮುನ್ಸೂಚನೆ ನೀಡಿದ್ದ ಭೀಮಾನಾಯ್ಕ್ ಅವರಿಗೆ ಆರಂಭದಲ್ಲಿಯೇ ಸಾರ್ವಜನಿಕರ ವಿರೋಧ ಉಂಟಾಗಿತ್ತು. ಆದ್ದರಿಂದ ಹಾಲಿನ ದರ ಏರಿಕೆ ಸದ್ಯಕ್ಕಿಲ್ಲ ಎಂದು ಹೇಳಿದ್ದರು. ಆದರೆ, ಮಂಗಳವಾರ ಹಾಲಿನ ದರ ಏರಿಕೆ ಕುರಿತು ಸಭೆ ನಡೆಯಲಿದ್ದು, ಈ ಕುರಿತು ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಿದ್ದಾರೆ.