ಟ್ಯಾಬ್ಲೋ ಆಯ್ಕೆಗೆ ಸಿದ್ದು ಯತ್ನಿಸಲಿ: ಮಾಜಿ ಸಿಎಂ ಬೊಮ್ಮಾಯಿ

ಹಿಂದೆ ನಮ್ಮ‌ ಸರ್ಕಾರ ಇದ್ದಾಗ ಕೇಂದ್ರದ ರಕ್ಷಣಾ ಸಚಿವರಿಗೆ ಮಾತನಾಡಿ ಮತ್ತೆ ಸ್ತಬ್ಧಚಿತ್ರ ಬರುವಂತೆ ಮಾಡಿದ್ದೆವು. ಆ ಪ್ರಯತ್ನವನ್ನು ಸಿದ್ದರಾಮಯ್ಯ ಅವರೂ ಮಾಡಬೇಕು. ಅದನ್ನು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

CM Siddaramaiah Try to select Tableau Says Former CM Basavaraj Bommai grg

ಬೆಂಗಳೂರು(ಜ.11):  ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಗತ್ಯವಾಗಿ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಮ್ಮ‌ ಸರ್ಕಾರ ಇದ್ದಾಗ ಕೇಂದ್ರದ ರಕ್ಷಣಾ ಸಚಿವರಿಗೆ ಮಾತನಾಡಿ ಮತ್ತೆ ಸ್ತಬ್ಧಚಿತ್ರ ಬರುವಂತೆ ಮಾಡಿದ್ದೆವು. ಆ ಪ್ರಯತ್ನವನ್ನು ಸಿದ್ದರಾಮಯ್ಯ ಅವರೂ ಮಾಡಬೇಕು. ಅದನ್ನು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.

ಸ್ತಬ್ಧಚಿತ್ರ ನಿರಾಕರಣೆ ಬಗ್ಗೆ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ

ಹಿಂದೆ 2018ರಲ್ಲಿ ಇವರು ಆಡಳಿತದಲ್ಲಿ ಇದ್ದಾಗ ಆಗಲೂ ಆಯ್ಕೆ ಆಗಿರಲಿಲ್ಲ. ಇವರು ಸುಮ್ಮನೆ ಜನರನ್ನು ಕೆರಳಿಸುವಂತೆ ಮಾಡುತ್ತಿದ್ದಾರೆ. ನಾವು ಕೂಡ ಕರ್ನಾಟಕದ ಟ್ಯಾಬ್ಲೋ ಬರಬೇಕು ಅಂತ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios