Asianet Suvarna News Asianet Suvarna News

ಅನ್ನ ಕೊಡುವ ಈ ನೆಲದ ನಿಯಮ ಪಾಲಿಸಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸಿಎಂ ಖಡಕ್ ಸೂಚನೆ

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

CM Siddaramaiah Tweets about Kannada nameplate is mandatory for merchant shop, shopping mall bengaluru rav
Author
First Published Dec 25, 2023, 11:42 PM IST

ಬೆಂಗಳೂರು (ಡಿ.25): ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಂದೇಶ ರವಾನಿಸಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯ ಅಳವಡಿಸಬೇಕು; ಅಂಗಡಿ ಮುಂಗಟ್ಟು ಶಾಪಿಂಗ್ ಮಾಲ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಬಿಬಿಎಂಪಿ ಆಯುಕ್ತ! 

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು. ಅಲ್ಲದೇ ಕೊಟ್ಟಿರುವ ಡೆಡ್‌ಲೈನ್‌ ಒಳಗೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳುವಂತೆ, ಒಂದು ವೇಳೆ ಕನ್ನಡ ನಾಮಫಲಕ ಅಳವಡಿಸದೇ ಅಸಡ್ಡೆ ತೋರಿದರೆ ಅಂತಹ ವ್ಯಾಪಾರ ಪರವಾನಗಿ ರದ್ದುಪಡಿಸುವುದಾಗಿ ಬಿಬಿಎಂಪಿ ಆಯುಕ್ತರು ಸಹ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. 

ದಲಿತ ನಾಯಕರ ಜೊತೆ ಸತೀಶ್ ಜಾರಕಿಹೊಳಿ ದೆಹಲಿಗೆ ದೌಡು; ಕನಕಪುರ ಬಂಡೆಗೆ ಲಗಾಮು ಹಾಕ್ತಾರಾ ಸಾಹುಕಾರ? 

 

 

Follow Us:
Download App:
  • android
  • ios