ಮೌಢ್ಯಕ್ಕೆ ಸಡ್ಡು: ಸಿಎಂ ಇಂದು ಮತ್ತೆ ಚಾಮರಾಜನಗರಕ್ಕೆ ಭೇಟಿ

ಬಸವಣ್ಣನ ಕಾಯಕ ತತ್ವದಲ್ಲಿ ನಂಬಿಕೆ ಇಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ‘ಸಿಎಂ ಆದವರು ಚಾಮರಾಜನಗರಕ್ಕೆ ಹೋದರೆ ಅ​ಧಿಕಾರ ಕಳೆದುಕೊಳ್ಳುತ್ತಾರೆ’ ಎನ್ನುವ ಮೌಢ್ಯ ಬದಿಗೊತ್ತಿ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡುತ್ತಿದ್ದಾರೆ.

CM visits Chamarajanagar again today rav

ಚಾಮರಾಜನಗರ (ಡಿ.13) : ಬಸವಣ್ಣನ ಕಾಯಕ ತತ್ವದಲ್ಲಿ ನಂಬಿಕೆ ಇಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ‘ಸಿಎಂ ಆದವರು ಚಾಮರಾಜನಗರಕ್ಕೆ ಹೋದರೆ ಅ​ಧಿಕಾರ ಕಳೆದುಕೊಳ್ಳುತ್ತಾರೆ’ ಎನ್ನುವ ಮೌಢ್ಯ ಬದಿಗೊತ್ತಿ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಯಾದ ಮೂರನೇ ತಿಂಗಳಲ್ಲಿ 2021ರ ಅ.7ರಂದು ಬೊಮ್ಮಾಯಿಯವರು ಚಾಮರಾಜನಗರಕ್ಕೆ ಆಗಮಿಸಿ, ನೂತನ ವೈದ್ಯಕೀಯ ಕಾಲೇಜು ಆಸ್ಪತ್ರೆ ಉದ್ಘಾಟಿಸಿದ್ದರು. ಈಗ ಮಂಗಳವಾರ ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿರುವ ಸಿಎಂ, ಡಾ.ಬಿ.ಆರ್‌.ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕಾಗಿ 25 ಸಾವಿರ ಜನರು ಕೂರಬಹುದಾದ ಬೃಹತ್‌ ವೇದಿಕೆಯನ್ನು ನಿರ್ಮಿಸಲಾಗಿದೆ. ನಗರದ ತುಂಬೆಲ್ಲಾ ಅವರಿಗೆ ಸ್ವಾಗತ ಕೋರುವ ಪ್ಲೆಕ್ಸ್‌ಗಳನ್ನು ಹಾಕಲಾಗಿದ್ದು, ಇಡೀ ನಗರ ಕೇಸರಿಮಯವಾಗಿದೆ. ಬಳಿಕ, ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ನೀಡಲಿದ್ದು, ನಂತರ ಸಿಎಂ, ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Chamarajanagar: ಬಿಜೆಪಿ ಭದ್ರಕೋಟೆ ಸೃಷ್ಟಿಗೆ ಕೈ ಜೋಡಿಸಿ: ಸಚಿವ ಸೋಮಣ್ಣ

ಮುಖ್ಯಮಂತ್ರಿಯಾದವರು ಚಾಮರಾಜನಗರಕ್ಕೆ ಹೋದರೆ ಅ​ಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಮೂಢನಂಬಿಕೆ ಹಿನ್ನೆಲೆಯಲ್ಲಿ ವೀರೇಂದ್ರ ಪಾಟೀಲರ ಬಳಿಕ 16 ವರ್ಷಗಳ ಕಾಲ ಯಾವ ಮುಖ್ಯಮಂತ್ರಿಯೂ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. ಎಸ್‌.ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಚ್‌.ಡಿ.ದೇವೇಗೌಡ, ಜೆ.ಎಚ್‌.ಪಟೇಲ್‌, ಎಸ್‌.ಎಂ.ಕೃಷ್ಣ, ಬಿ.ಎಸ್‌.ಯಡಿಯೂರಪ್ಪ, ಸದಾನಂದ ಗೌಡ ಅವರು ಮುಖ್ಯಮಂತ್ರಿಗಳಾಗಿದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. 2007ರಲ್ಲಿ ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆದಾಗ ಭೇಟಿ ನೀಡಿ ಮೌಢ್ಯತೊಡೆದು ಹಾಕಿದ್ದರು. ನಂತರ, ಜಗದೀಶ್‌ ಶೆಟ್ಟರ್‌ ಭೇಟಿ ನೀಡಿದ್ದರು. ಬಳಿಕ, ಸಿದ್ದರಾಮಯ್ಯನವರು 11 ಬಾರಿ ಭೇಟಿ ನೀಡಿದ್ದರು.

ಅವಧಿಪೂರ್ವ ಚುನಾವಣೆ ಇಲ್ಲ, ಅಧಿಕಾರ ಪೂರೈಸುತ್ತೇವೆ: ಸಿಎಂ ಬೊಮ್ಮಾಯಿ

ಈ ಹಿಂದೆ, ಚಾಮರಾಜನಗರ ತಾಲೂಕು ಕೇಂದ್ರವಾಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್‌.ಆರ್‌.ಬೊಮ್ಮಾಯಿ ಅವರು ಭೇಟಿ ನೀಡಿ, ಚಾಮರಾಜನಗರ ತಾಲೂಕು ಕಚೇರಿ ಉದ್ಘಾಟನೆ ಮಾಡಿದ್ದರು. ಇದೀಗ ಅವರ ಪುತ್ರ ಜಿಲ್ಲಾ ಕೇಂದ್ರಕ್ಕೆ ಎರಡನೇ ಬಾರಿಗೆ ಆಗಮಿಸುತ್ತಿದ್ದಾರೆ.

Latest Videos
Follow Us:
Download App:
  • android
  • ios