ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆಗೆ ಸಿದ್ಧ: ಬಿಎಸ್‌ವೈ

ಮನೆಯಿಂದ ಯಾರೂ ಹೊರ ಬರಬೇಡಿ| ಬಂದರೆ ಕಠಿಣ ಕ್ರಮ| ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರೆಸಲು ಸಿದ್ಧ| ಪಿಎಂ ಜೊತೆ ಮಾತನಾಡಿ ಮುಂದಿನ ನಿರ್ಧಾರ| ಕ್ಯಾಬಿನೆಟ್ ಸಭೆ ಬಳಿಕ ಸಿಎಂ ಯಡಿಯೂರಪ್ಪ ಮಾತು

CM Yediyurappa and cabinet is ready to extend lockdown in Karnataka after April 14th

ಬೆಂಗಲೂರು(ಏ.09): ಕೊರೋನಾ ವೈರಸ್ ನಿಯಂತ್ರಿಸಲು ರಾಜ್ಯಾದ್ಯಂತ ಹೇರಲಾಗಿರುವ ಲಾಕ್‌ಡೌನ್ ಯಾವಾಗ ತೆರವಾಗುತ್ತೆ ಎಂಬ ಪ್ರಶ್ನೆ ರಾಜ್ಯದ ಜನತೆಯನ್ನು ಕಾಡುತ್ತಿದೆ. ಹೀಗಿರುವಾಗ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇದಕ್ಕೆ ಉತ್ತರ ಸಿಗುವ ನಿರೀಕ್ಷೆ ಇತ್ತು. ಸದ್ಯ ಕ್ಯಾಬಿನೆಟ್ ಸಭೆ ಕೊನೆಗೊಂಡಿದ್ದು, ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರೆಸಲು ನಾವು ಸಿದ್ಧ. ಆದರೆ ನಾಳೆ, ಶುಕ್ರವಾರ ಪ್ರಧಾನಿ ಮೋದಿ ಜೊತೆ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಲ್ಳುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಕ್ಯಾಬಿನೆಟ್ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ 'ಏಪ್ರಿಲ್ 14 ರಿಂದ 15 ದಿನಗಳ ಕಾಲ ಲಾಕ್ ಡೌನ್ ಮುಂದೂವರಿಸಲು ಸಚಿವರೆಲ್ಲರೂ ತಜ್ಞರ ವರದಿಗೆ ಸಮ್ಮತಿ ಸೂಚಿಸಿದ್ದಾರೆ. ನಾಳೆ ಪ್ರಧಾನಿ ಜೊತೆ ಮಾತಾಡಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ತೇನೆ. ಲಾಕ್ ಡೌನ್ ಒಂದು ಹಂತಕ್ಕೆ ಬರಬೇಕಾದರೆ ಜನರು 14 ರವರೆಗೂ ಕಟ್ಟುನಿಟ್ಟಾಗಿ ಮನೆಯಲ್ಲಿರಬೇಕು. ದಯವಿಟ್ಟು ಯಾರೂ ಮನೆಯಿಂದ ಹೊರ ಬರಬೇಡಿ. ನಿಯಮ ಉಲ್ಲಂಘಿಸಿ ಹೊರ ಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ' ಎಂದಿದ್ದಾರೆ.

ರಾಜ್ಯಾ​ದಂತ ಲಾಕ್‌ಡೌನ್‌ ಮುಂದುವರಿಸಿ: ದೇವಿ​ಶೆಟ್ಟಿ ನೇತೃ​ತ್ವದ ಸಮಿತಿ ಶಿಫಾ​ರಸು!

ಅಲ್ಲದೇ 'ರಾಜ್ಯದ ಹಲವೆಡೆ ಕೃಷಿ ಚಟುವಟಿಗೆ ಪ್ರಾರಂಭವಾಗಿದೆ. ಬಿತ್ತಿನೆ ಬೀಜ, ಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲು ಹಾಗೂ ಹೂ ಬೆಳೆ ನಷ್ಟದ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಲು ಸೂಚಿಸಿದ್ದೇನೆ. ವರದಿ ಬಂದ ಬಳಿಕ ಪರಿಹಾರ ನೀಡುತ್ತೇವೆ' ಎಂಬುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಶಾಸಕರ ಸಚಿವರ ಸಂಬಳ ಕಟ್:

ಇನ್ನು ಇದೇ ವೇಳೆ ಕ್ಯಾಬಿನೆಟ್ ಸಭೆಯಲ್ಲಿ ತೆಗೆದುಕೊಂಡ ಇತರ ನಿರ್ಧಾರಗಳ ಕುರಿತು ಉಲ್ಲೇಖಿಸಿದ ಸಚಿವ ಮಾಧುಸ್ವಾಮಿ 'ಶಾಸಕರ ಸಚಿವರ ಒಂದು ವರ್ಷದ ವೇನದಲ್ಲಿ ಶೇ 30 ರಷ್ಟು ಕಡಿತ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಮೂಲಕ ಹದಿಐದದು ಕೋಟಿ ಮೊತ್ತವನ್ನು ಕೋವಿಡ್ ಸಿಎಂ ಫಂಡ್‌ಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ' ಎಂದಿದ್ದಾರೆ.

ಕೊರೋನಾಗೆ ಇಂದಿಗೆ 1 ತಿಂಗಳು: ದೇಶದಲ್ಲೇ ನಂ.3 ಆಗಿದ್ದ ರಾಜ್ಯ ಈಗ ನಂ.11!

ಲಾಕ್‌ಡೌನ್ ವಿಸ್ತರಿಸಲು ದೇವಿ​ಶೆಟ್ಟಿ ನೇತೃ​ತ್ವದ ಸಮಿತಿ ಶಿಫಾ​ರಸು!

ಇನ್ನು ಈಗಾಗಲೇ ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಲಾಕ್‌ಡೌನ್ ವಿಸ್ತರಿಸುವ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದರಲ್ಲಿ ಪ್ರಮುಖವಾಗಿ ರಾಜ್ಯದಲ್ಲಿ ಏಪ್ರಿಲ್‌ 14ರ ಬಳಿಕ ಲಾಕ್‌ಡೌನ್‌ ಏಕಾಏಕಿ ಸಡಿಲಗೊಳಿಸಿದರೆ ಸೋಂಕು ಹರಡುವ ಪ್ರಮಾಣ ತೀವ್ರಗೊಂಡು ಪ್ರಮಾದ ಸೃಷ್ಟಿಯಾಗಲಿದೆ. ಹೀಗಾಗಿ ಇನ್ನೂ ಕೆಲ ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲೂ ಲಾಕ್‌ಡೌನ್‌ ಮುಂದುವರೆಸಬೇಕು. ಇದು ಸಾಧ್ಯವಾಗದಿದ್ದರೆ ಹಾಟ್‌ಸ್ಪಾಟ್‌ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮತ್ತಷ್ಟುಬಿಗಿಗೊಳಿಸಿ ಉಳಿದ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಸಡಿಲಗೊಳಿಸಬಹುದು ಎಂದು ತಿಳಿಸಿದೆ.

ರಾಜ್ಯದ ಹಾಟ್‌ಸ್ಪಾಟ್‌ ಜಿಲ್ಲೆಗಳು ಯಾವುವು?

CM Yediyurappa and cabinet is ready to extend lockdown in Karnataka after April 14th

Latest Videos
Follow Us:
Download App:
  • android
  • ios