Asianet Suvarna News Asianet Suvarna News

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಬಗ್ಗೆ ಮಹತ್ವದ ಸೂಚನೆ ಹೊರಡಿಸಿದ ಸಿಎಂ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು, ಕೋಲಾರ ಜಿಲ್ಲೆಯ ಶಾಸಕರ ನಿಯೋಗ ಭೇಟಿಯಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿತು. ಈ ವೇಳೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ.

CM Yediyurappa Gives direction directs for acceleration on kc valley and yettinahole projects
Author
Bengaluru, First Published Jun 23, 2020, 3:57 PM IST

ಬೆಂಗಳೂರು, (ಜೂನ್.23): ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಕುರಿತು ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಇಂದು (ಮಂಗಳವಾರ)‌ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿತು.

ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದ್ರು.

'ಮುಂದಿನ ವರ್ಷ ಎತ್ತಿನಹೊಳೆ ಯೋಜನೆ ಪೂರ್ಣ'..!
ಸಿಎಂ ಸೂಚನೆ
CM Yediyurappa Gives direction directs for acceleration on kc valley and yettinahole projects

ಕೆ.ಸಿ. ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂ ಎಲ್ ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಾಗಿದೆ. ಆದರೆ ಪ್ರಸ್ತುತ ಕೇವಲ 284 ಎಂ ಎಲ್ ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚಿನ ನೀರು ಲಭ್ಯವಾಗಿಸಲು ಬೆಂಗಳೂರು ಜಲ ಮಂಡಳಿಯು ಕ್ರಮ ವಹಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ  ಸಿಎಂ ಸೂಚನೆ ನೀಡಿದರು.

ಅಲ್ಲದೆ ಎಸ್ ಟಿ ಪಿಗಳ ಸಾಮರ್ಥ್ಯ ವರ್ಧನೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕು ನಿವಾರಿಸಿ, ಕಾಮಗಾರಿ ಚುರುಕುಗೊಳಿಸುವುದಾಗಿ ನಿಯೋಗದ ಸದಸ್ಯರಿಗೆ ಸಿಎಂ ಭರವಸೆ ನೀಡಿದರು.

ಎತ್ತಿನ ಹೊಳೆ ಯೋಜನೆಗೆ ಹಸಿರು ನ್ಯಾಯಾಧಿಕರಣ ಅಸ್ತು

ಸಣ್ಣ ನೀರಾವರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಅಬಕಾರಿ ಸಚಿವ ಕೆ ನಾಗೇಶ್, ಸಂಸದ ಮುನಿಸ್ವಾಮಿ, ವಿಧಾನಸಭೆಯ ಮಾಜಿ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಕುಮಾರ್ ಹಾಗೂ ಕೋಲಾರ ಜಿಲ್ಲೆಯ ಶಾಸಕರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios