ಬೆಳಗಾವಿ: ಸರ್ಕಾರ ಪತನವಾಗುವುದು ಖಚಿತ ಎಂದು ಪದೇ ಪದೆ ಹೇಳುತ್ತಿದ್ದ ಮಾಜಿ ಸಚಿವ, ಶಾಸಕ ಉಮೇಶ ಕತ್ತಿ ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಸೋಮವಾರ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಪೂರ್ವದಲ್ಲಿಯೇ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕೆಡುವುದಿಲ್ಲ. 

ಬಜೆಟ್‌ ಅಧಿವೇಶನದ ಮೊದಲು ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದ ಅವರು, ಸಿಎಂ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡುತ್ತೇನೆ ಎನ್ನುವುದು ಇದಕ್ಕೆ ನಿರ್ದಶನವಾಗಿದೆ ಎಂದರು.