Asianet Suvarna News Asianet Suvarna News

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 24 ಗಂಟೆಯಲ್ಲಿ ರಾಜ್ಯದ ಉತ್ತರ ಒಳನಾಡಿನ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮುಂಗಾರು ಚುರುಕುಗೊಂಡಿದ್ದು, ತಿಂಗಳಾಂತ್ಯದ ವರೆಗೂ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Coastal heavy rain next 5 days meteorological department forecast bengaluru rav
Author
First Published Sep 28, 2023, 4:46 PM IST

ಬೆಂಗಳೂರು (ಸೆ.28) :  ಮುಂದಿನ ಐದು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರದಿಂದ ಅ.2ರ ವರೆಗೆ ಕರಾವಳಿಯಾದ್ಯಂತ ಮೋಡ ಕವಿದ ವಾತಾವರಣ, ಕೆಲವೊಮ್ಮೆ ಗುಡುಗು ಮಿಂಚು ಕಾಣಿಸಿಕೊಳ್ಳಬಹುದು. ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 64.50 ಮಿ.ಮೀ.ನಿಂದ 115.50 ಮಿ.ಮೀ.ವರೆಗೂ ಮಳೆಯಾಗಬಹುದು ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

2 ಮನೆಗಳಿಗೆ ಹಾನಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬುಧವಾರ ಮುಂಜಾನೆವರೆಗೆ ಸರಾಸರಿ 19.8 ಮಿ.ಮೀ. ಮಳೆಯಾಗಿರುತ್ತದೆ. ಮಂಗಳವಾರ ರಾತ್ರಿ ಸುರಿದ ಮಳೆಗೆ ಕಾರ್ಕಳ ತಾಲೂಕಿನ ಈದು ಗ್ರಾಮದ ಕಷ್ಣಪ್ಪ ಮೂಲ್ಯ ಅವರ ವಾಸ್ತವ್ಯದ ಮನೆಗೆ 40,000 ರು ಮತ್ತು ಎರ್ಲಪಾಡಿ ಗ್ರಾಮದ ಸುಗಂಧಿ ಆಚಾರ್ತಿ ಅವರ ಮನೆಗೆ 20,000 ರು. ನಷ್ಟ ಸಂಭವಿಸಿದೆ.

ಉತ್ತರ ಕರ್ನಾಟಕದಲ್ಲಿ ಇಂದು ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ತಿಂಗಳಾಂತ್ಯದವರೆಗೆ ರಾಜ್ಯದಲ್ಲಿ ಉತ್ತಮ ಮಳೆ ಭವಿಷ್ಯ

ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮುಂಗಾರು ಚುರುಕುಗೊಂಡಿದ್ದು, ತಿಂಗಳಾಂತ್ಯದ ವರೆಗೂ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಸೆ.29ರಿಂದ ಅ.3ರ ವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ರಿಂದ ಅ.1ರ ವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ತಮಿಳುನಾಡಿನ ಹಲವೆಡೆ ಭಾರಿ ಮಳೆಗೆ ಶಾಲೆಗೆ ರಜೆ, ಆದರೂ ಕಾವೇರಿ ನದಿ ನೀರಿಗೆ ಪಟ್ಟು!

ಸೆ.30 ಹಾಗೂ ಅ.1 ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ.

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಚಿಕ್ಕಬಳ್ಳಾಪುರದ ತೊಂಡೇಭಾವಿಯಲ್ಲಿ ಅತಿ ಹೆಚ್ಚು 5 ಸೆಂ.ಮೀ ಮಳೆಯಾದ ವರದಿಯಾಗಿದೆ. ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4, ಹೊನ್ನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರು ತಲಾ 3, ಕುಮಟಾ, ತಾಳಿಕೋಟೆ, ಫರಹತಾಬಾದ್, ಚಿಂಚೋಳಿ, ಕೆಂಭಾವಿ, ಬೆಂಗಳೂರು ನಗರ, ಗೌರಿಬಿದನೂರು, ಕುರುಗೋಡು ಹಾಗೂ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.

Follow Us:
Download App:
  • android
  • ios