Breaking: ಮಾರುಕಟ್ಟೆಯಿಂದ ಬ್ಯಾನ್ ಆಗುತ್ತಾ ಕೆಂಪು ಕೆಂಪು ಕಬಾಬ್? ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್
ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.
ಬೆಂಗಳೂರು (ಜೂ.24): ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಕಬಾಬ್ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ.
ರಾಜ್ಯದ 36 ಕಡೆಗಳಲ್ಲಿ ಕಬಾಬ್ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ನೀಡಲಾಗಿತ್ತು. ಇದ್ರಲ್ಲಿ ಯೆಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕಲರ್ ಬ್ಯಾನ್ ಮಾಡಿದೆ. ಇನ್ನು ಉಲ್ಲಂಘನೆ ಕಂಡುಬಂದಲ್ಲಿ 7 ವರ್ಷ ಶಿಕ್ಷೆ ಹಾಗೂ 10 ಲಕ್ಷ ದಂಡದ ಎಚ್ಚರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಲರ್ ನಿಷೇಧಕ್ಕೆ ಕಾರಣವೇನು?: ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು. ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI ಸಂಗ್ರಹಿಸಿದ್ದು, ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಾದರಿ ಟೆಸ್ಟ್ ಮಾಡಲಾಗಿದೆ. ಟೆಸ್ಟಿಂಗ್ ವೇಳೆ ಕೃತಕ ಬಣ್ಣಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಇರೋದು ಪತ್ತೆಯಾಗಿತ್ತು.
ಗ್ಯಾರಂಟಿ ಎನ್ನುತ್ತಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯೇ ಮುಗಿದಿದೆ: ಶಾಸಕ ಯತ್ನಾಳ್
ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್-ಬಿ ರಾಸಾಯನಿಕ ಅಂಶ ಪತ್ತೆಯಾಗಿದ್ರೆ, ಇತ್ತ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್‌ಸೆಟ್ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರ್ರಾಜಿನ್’ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕಲರ್ ಬಳಕೆಯನ್ನು ನಿಷೇಧಿಸಿದೆ.