ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿರುವ ಕಡೆ ಗಸ್ತು ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನಗರ ಸಂಚಾರ ವಿಭಾಗದ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೂಚಿಸಿದ್ದಾರೆ.
ಬೆಂಗಳೂರು (ಜೂ.13) ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿರುವ ಕಡೆ ಗಸ್ತು ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನಗರ ಸಂಚಾರ ವಿಭಾಗದ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೂಚಿಸಿದ್ದಾರೆ.
ಇನ್ಫೆಂಟ್ರಿ ರಸ್ತೆಯಲ್ಲಿರುವ ನಗರ ಸಂಚಾರ ಪೊಲೀಸ್ ವಿಭಾಗದ ಸಂಚಾರ ನಿರ್ವಹಣಾ ಕೇಂದ್ರ(ಟಿಎಂಸಿ)ಕ್ಕೆ ಸೋಮವಾರ ಬೆಳಗ್ಗೆ ಭೇಟಿ ನೀಡಿ ಸಂಚಾರ ನಿಯಂತ್ರಣ ಕೊಠಡಿಯಲ್ಲಿ ಕುಳಿತು ನಗರದ ವಿವಿಧೆಡೆ ಉಂಟಾಗಿದ್ದ ವಾಹನ ಸಂಚಾರ ದಟ್ಟಣೆಯನ್ನು ಪರಿಶೀಲಿಸಿದರು. ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಅವರು ನಗರದಲ್ಲಿ ಯಾವ ಸ್ಥಳಗಳಲ್ಲಿ ಯಾವ ಸಮಯದಲ್ಲಿ ಹೆಚ್ಚು ವಾಹನ ಸಂಚಾರ ದಟ್ಟಣೆಯಾ ಗಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಿದರು.
Bengaluru: ಹೊಯ್ಸಳದಲ್ಲಿ ಪೊಲೀಸ್ ಆಯುಕ್ತ ದಯಾನಂದ್ ಸಿಟಿ ರೌಂಡ್ಸ್
ಸಂಚಾರ ನಿಯಂತ್ರಣ ಕೊಠಡಿಯಿಂದಲೇ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಆಯಾಯ ಸ್ಥಳಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ನಗರದಲ್ಲಿ ಸೋಮವಾರ ಮುಂಜಾನೆ ತುರ್ತು ಸಮಯದ ಸಂಚಾರ ನಿಯಂತ್ರಣ ಪೊಲೀಸರಿಗೆ ಒಂದು ಸಾಹಸ ಇದ್ದಂತೆ. ಹೀಗಾಗಿ ಸಂಚಾರ ವಿಭಾಗದ ಎಲ್ಲಾ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಕಡೆ ಗಸ್ತು ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಸೂಚಿಸಿದರು.
