Asianet Suvarna News Asianet Suvarna News

ಕೇಂದ್ರ ಸಚಿವ ಕುಮಾರಸ್ವಾಮಿ ಕುರಿತು ಅವಹೇಳನಕಾರಿ ಪೋಸ್ಟ್: ಮಹಿಳೆ ವಿರುದ್ಧ ದೂರು

ಎಚ್.ಡಿ.ಕುಮಾರಸ್ವಾಮಿ ಹಾಗೂ ದರ್ಶನ್ ಬಂಧನ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ. ಆದಾಗ್ಯೂ ಅನವಶ್ಯಕವಾಗಿ ದರ್ಶನ್ ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಎಳೆದು ತಂದು ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ನಲ್ಲಿ ಬಾಯಿಗೆ ಬಂದ ಹಾಗೆ ಬೈದು ಅವಮಾನ ಮಾಡಿ, ಪೋಸ್ಟ್ ಮಾಡಿದ ಮಹಿಳೆ. 
 

Complaint against woman For Derogatory Post about Union Minister HD Kumaraswamy grg
Author
First Published Jun 22, 2024, 12:21 PM IST

ಮಂಡ್ಯ(ಜೂ.22):  ಸಾಮಾಜಿಕ ಜಾಲತಾಣದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅತ್ಯಂತ ಕೀಳು ಮಟ್ಟದ ಭಾಷೆ ಪ್ರಯೋಗಿಸಿ ಪೋಸ್ಟ್ ಮಾಡಿರುವ ಮಂಗಳ ಎಂಬ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡ, ವಕೀಲ ಎಂ.ಎಸ್. ರಘುನಂದನ್‌ ಅವರು ಶುಕ್ರವಾರ ಮಂಡ್ಯ ಸೈಬರ್‌ಠಾಣೆಗೆ ದೂರು ನೀಡಿದ್ದಾರೆ. 

ಎಚ್.ಡಿ.ಕುಮಾರಸ್ವಾಮಿ ಹಾಗೂ ದರ್ಶನ್ ಬಂಧನ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ. ಆದಾಗ್ಯೂ ಅನವಶ್ಯಕವಾಗಿ ದರ್ಶನ್ ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಎಳೆದು ತಂದು ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ನಲ್ಲಿ ಬಾಯಿಗೆ ಬಂದ ಹಾಗೆ ಬೈದು ಅವಮಾನ ಮಾಡಿ, ಪೋಸ್ಟ್ ಮಾಡಿದ್ದಾಳೆ. 

ವೀರ್ ಸಾವರ್ಕರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್; ಕೋಮು ಸೌಹಾರ್ದತೆಗೆ ಕೊಳ್ಳಿ ಇಡಲು ಯತ್ನಿಸಿದ ಆರೋಪಿ ಬಂಧನ

ಮಹಿಳೆಯ ಈ ವಿಡಿಯೋ ವೈರಲ್ ಆಗಿದ್ದು, ಜೆಡಿ ಎಸ್ ಕಾರ್ಯಕರ್ತರಿಗೆ ಇದರಿಂದ ನೋವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ. ಈ ಸಂಬಂಧ ಸೈಬರ್‌ಡ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios