ಹಣ ಪಡೆದಿರುವ ಆಡಿಯೋ ವೈರಲ್‌ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಸತ್ಯಾಂಶ ಬಯಲುಗೊಳಿಸಬೇಕು ಎಂದು ಒತ್ತಾಯಿಸಿ ಕೆ.ಆರ್‌.ಪೇಟೆ ತಾಲೂಕು ಕಾಂಗ್ರೆಸ್‌ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಿಗೆ ಸೋಮವಾರ ದೂರು ನೀಡಿದರು.

ಮಂಡ್ಯ (ಜು.3): ಹಣ ಪಡೆದಿರುವ ಆಡಿಯೋ ವೈರಲ್‌ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಸತ್ಯಾಂಶ ಬಯಲುಗೊಳಿಸಬೇಕು ಎಂದು ಒತ್ತಾಯಿಸಿ ಕೆ.ಆರ್‌.ಪೇಟೆ ತಾಲೂಕು ಕಾಂಗ್ರೆಸ್‌ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಿಗೆ ಸೋಮವಾರ ದೂರು ನೀಡಿದರು.

ನಗರದ ಜಿಲ್ಲಾ ಎಸ್ಪಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್‌ ಮುಖಂಡರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಮುಖಂಡರು ಜೆಡಿಎಸ್‌ ಅಭ್ಯರ್ಥಿ ಕಡೆಯವರಿಂದ ಹಣ ಪಡೆದಿದ್ದಾರೆ ಎಂಬ ಆಡಿಯೋ ವೈರಲ್‌ ಆಗಿರುವ ಬಗ್ಗೆ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ಅವರನ್ನು ವಿಚಾರಣೆ ನಡೆಸಿ ಸತ್ಯವನ್ನು ಬೆಳಕಿಗೆ ತರಬೇಕು ಎಂದು ಮನವಿ ಮಾಡಿದರು.

ಹಾಲು ತಗೊಂಡೋಗು ಅಂದ್ರೆ, ಮಗಳ ಪ್ರಾಣನೇ ಹೊತ್ತೊಯ್ದ ಹಾಲಿನ ವಾಹನ

ನಮ್ಮ ಮೇಲೆ ಸುಳ್ಳು ಆಪಾದನೆ ಮಾಡಿ ಸಾರ್ವಜನಿಕ ಬದುಕಿಗೆ ಚ್ಯುತಿ ತಂದಿರುವ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಬೇಕು. ಆರೋಪದಿಂದ ಮುಕ್ತ ಮಾಡಬೇಕು ಎಂದು ಆಗ್ರಹಿಸಿ ಕೆ.ಆರ್‌ .ಪೇಟೆ ತಾಲೂಕು ಕಾಂಗ್ರೆಸ್‌ ಮುಖಂಡರಾದ ವಿಜಯ್‌ ರಾಮೇಗೌಡ, ಎಂ.ಡಿ.ಕೃಷ್ಣಮೂರ್ತಿ, ಕೋಡಿಮಾರನಹಳ್ಳಿ ದೇವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್‌, ನಾಗೇಂದ್ರಕುಮಾರ್‌ ಅವರ ನಿಯೋಗ ಎಸ್ಪಿಯವರನ್ನು ಮನವಿ ಮೂಲಕ ಒತ್ತಾಯಿಸಿತು. ಈ ವೇಳೆ ದೂರು ಸ್ವೀಕರಿಸಿದ ಎಸ್ಪಿ ಎನ್‌.ಯತೀಶ್‌ ಅಧೀನ ಅಧಿಕಾರಿಯಿಂದ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.