ರಾಜಭವನದಲ್ಲಿ ಮಾಂಸಾಹಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಾವು ರಾಜಭವನಕ್ಕೆ ಯಾರೇ ಬಂದರೂ ಶಾಕಾಹಾರವನ್ನೇ ಉಣಬಡಿಸುತ್ತೇವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹೇಳಿದ್ದಾರೆ.
ಚನ್ನರಾಯಪಟ್ಟಣ (ಏ.11): ರಾಜಭವನದಲ್ಲಿ ಮಾಂಸಾಹಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಾವು ರಾಜಭವನಕ್ಕೆ ಯಾರೇ ಬಂದರೂ ಶಾಕಾಹಾರವನ್ನೇ ಉಣಬಡಿಸುತ್ತೇವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹೇಳಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಶ್ರೀಜೈನ ಮಠದ ಆಡಳಿತ ಮಂಡಳಿ ಗುರುವಾರ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರರ 2624ನೇ ಜನ್ಮ ಕಲ್ಯಾಣೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ರಾಜಭವನಕ್ಕೆ ವಿದೇಶಿಯರು ಬಂದರೂ ಸಸ್ಯಾಹಾರವನ್ನೇ ನೀಡಲಾಗುತ್ತದೆ ಎಂದು ತಿಳಿಸಿದರು.
ಜೈನ ಧರ್ಮ ಅಹಿಂಸೆ ಪ್ರತಿಪಾದಿಸುತ್ತದೆ. ಆದರೆ ಈ ಕ್ಷೇತ್ರದ ಸುತ್ತಲೂ ಮಾಂಸ ಹಾಗೂ ಮದ್ಯದ ಅಂಗಡಿ ಹೆಚ್ಚಿವೆ. ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರಲ್ಲದೆ, ಈ ಬಗ್ಗೆ ಸರ್ಕಾರದ ಜೊತೆ ಮಾತನಾಡುವಂತೆ ಸಮಾರಂಭದಲ್ಲಿದ್ದ ಸಚಿವ ಡಿ.ಸುಧಾಕರ್ ಅವರಿಗೆ ಸೂಚಿಸಿದರು. ಸಾನ್ನಿಧ್ಯ ವಹಿಸಿದ್ದ ಕ್ಷೇತ್ರದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಜೈನ ಧರ್ಮದ ಸ್ಥಾಪಕ 24ನೇ ತೀರ್ಥಂಕರ ಮಹಾವೀರನೆಂದು ಉಲ್ಲೇಖಿಸುತ್ತಿರುವುದು ತಪ್ಪು ಎಂದರು. ಪ್ರತಿ ಧರ್ಮದ ಮೂಲ ಉದ್ದೇಶ ಮೋಕ್ಷ ಪಡೆಯುವುದಾಗಿದ್ದು ಮನ, ವಚನ, ಕಾಯಗಳಿಂದ ಯಾರಿಗೂ ಹಿಂಸೆ ಮಾಡದೇ ಇರುವುದು ಅಹಿಂಸೆ ಎಂದರು.
ಹೋಟೆಲ್ ಬೆಲೆ ಏರಿಕೆ ನಿಯಂತ್ರಣಕ್ಕಿಲ್ಲ ವ್ಯವಸ್ಥೆ: ಗ್ರಾಹಕರ ಮೇಲೆ ಸವಾರಿ ತಡೆಯೋರ್ಯಾರು?
ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಸಿ.ಎನ್.ಬಾಲಕೃಷ್ಣ, ಕ್ಷೇತ್ರದ ಪ್ರಸಾದ ಭವನಕ್ಕೆ ಕೇಂದ್ರದ ಬಳಿ ಸಹಕಾರಕ್ಕೆ ಸಚಿವರಲ್ಲಿ ಪ್ರಸ್ತಾಪಿಸಿದ್ದೇವೆ ಎಂದು ತಿಳಿಸಿದರು. ಎಚ್.ಡಿ.ದೇವೇಗೌಡರು ಸಹ ಕೇಂದ್ರದ ಸಚಿವರಲ್ಲಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಒತ್ತಾಯಿಸಿದ್ದಾರೆಂದು ಶಾಸಕರು ತಿಳಿಸಿದರು. ಅತಿಥಿಗಳಾಗಿದ್ದ ಸಚಿವ ಡಿ.ಸುಧಾಕರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಮಾಜಿ ಶಾಸಕ ಎಂ.ಎ.ಗೋಪಾಲಸ್ವಾಮಿ ಮಾತನಾಡಿದರು.
ಶಾಖಾಹಾರವನ್ನೇ ನೀಡುತ್ತೇವೆ: ಆಹಾರ ಪದಾರ್ಥದಲ್ಲಿ ನಾವು ಕಟ್ಟುನಿಟ್ಟು ಪಾಲಿಸುತ್ತೇವೆ. ಸನಾತನ ಧರ್ಮಕ್ಕೂ ಜೈನ ಧರ್ಮಕ್ಕೂ ಆಹಾರದಲ್ಲಿ ಸಾಮ್ಯತೆ ಇದೆ. ನಾವು ರಾಜಭವನಕ್ಕೆ ಯಾರೇ ಬಂದರು ಶಾಖಾಹಾರವನ್ನೇ ನೀಡುತ್ತೇವೆ. ರಾಜಭವನದಲ್ಲಿ ಮಾಂಸಾಹಾರ ಸಂಪೂರ್ಣ ನಿಷೇಧಿಸಲಾಗಿದೆ ಎಂದರು. ಇದೇ ವೇಳೆ ತಮ್ಮ ಇಬ್ಬರು ಮೊಮ್ಮಕ್ಕಳಿಗೆ ಜೈನ ಧರ್ಮದ ಹೆಣ್ಣುಮಕ್ಕಳನ್ನು ಮದುವೆ ಮಾಡಿಕೊಳ್ಳಲಾಗಿದೆ ಎಂದು ಕೂಡ ಹೇಳಿದರು.
ಹೊಸ ಮೆಟ್ರೋ ಪಿಲ್ಲರ್‌ಗಳ ನಡುವೆ ಮಣ್ಣು ರಹಿತ ಗಾರ್ಡನ್ ನಿರ್ಮಾಣ
ಮಹಾವೀರರ ವಾಣಿ ಪ್ರಸ್ತುತ: ಜಗತ್ತಿನಲ್ಲಿ ಅಶಾಂತಿಯ ವಾತಾವರಣ ಎಲ್ಲೆಡೆ ನಿರ್ಮಾಣವಾಗಿದ್ದು, ಕ್ರೋಧಾದಿ ಹಿಂಸೆಗಳು ಸಮಾಜಗಳಲ್ಲಿ ಭುಗಿಲೆದ್ದಿರುವುದರಿಂದ ಶಾಂತಿಯ ಸಂದೇಶದ ಅಗತ್ಯತೆಯನ್ನು ಬಣ್ಣಿಸಿದರು. ಜೈನ ಧರ್ಮವು ಪ್ರಾಚೀನ ಕಾಲದಿಂದಲೂ ಸಹ ಕ್ಷಮಾಧರ್ಮ ಮಾರ್ಗದಲ್ಲಿ ಸಾಗಿದ್ದು, ಸಹಬಾಳ್ವೆಯಂತೆ ಎಲ್ಲರೊಂದಿಗೂ ಬದುಕು, ಬದುಕಲು ಬಿಡು ಎಂಬ ಮಹಾವೀರರ ವಾಣಿ ಪ್ರಸ್ತುತ ಅಗತ್ಯವಾಗಿದೆ. ಕ್ಷೇತ್ರದ ಮನವಿಗೆ ಸ್ಪಂದಿಸಿದ ರಾಜ್ಯಪಾಲರು ಶ್ರವಣಬೆಳಗೊಳ ಸುತ್ತಮುತ್ತ ಅನೇಕ ಮಾಸದ ಅಂಗಡಿಗಳು ಎಗ್ಗಿಲ್ಲದೇ ತೆರೆದಿದ್ದು, ತ್ಯಾಗಿಗಳ ಸಸ್ಯಹಾರಿಗಳ ಮನಸ್ಸಿಗೆ ತುಂಬಾ ನೋವಾಗಿರುವುದರ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.
