Asianet Suvarna News Asianet Suvarna News

Karnataka: ಮನೆ ನಿರ್ಮಾಣ 2 ತಿಂಗಳಲ್ಲಿ ಪೂರ್ಣಗೊಳಿಸಿ: ಸೋಮಣ್ಣ

*   ಗೋಡೆ, ಚಾವಣಿ ಹಂತದ ಮನೆ ಮಾ.22ರೊಳಗೆ ಮುಗಿಸಿ
*  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ 
*  ಕಾನೂನು ತೊಡಕುಗಳ ಪರಿಹಾರ ಕ್ರಮಗಳಲ್ಲಿ ಬಿಡಿಎ ಪಾತ್ರ ಮಹತ್ವದ್ದು 

Complete the Home Construction in 2 Months Says V Somanna grg
Author
Bengaluru, First Published Jan 6, 2022, 5:52 AM IST

ಬೆಂಗಳೂರು(ಜ.06):  ಗೋಡೆ ಮತ್ತು ಛಾವಣಿ ಹಂತದಲ್ಲಿರುವ ಮನೆಗಳನ್ನು ಬರುವ ಮಾ.22ರೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ(V Somanna) ಸೂಚನೆ ನೀಡಿದ್ದಾರೆ.

ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ನೀಡಲಾದ ಹೊಸ ಮನೆಗಳ ಫಲಾನುಭವಿಗಳ ಆಯ್ಕೆ ಮತ್ತು ರಾಜ್ಯದ(Karnataka) ಗ್ರಾಮೀಣ ಭಾಗದಲ್ಲಿ(Rural Area) ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬುಧವಾರ ರಾಜ್ಯದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಪ್ರಗತಿಯಲ್ಲಿರುವ ಮನೆಗಳನ್ನು ಅದರಲ್ಲಿಯೂ ಗೋಡೆ ಮತ್ತು ಛಾವಣಿ ಹಂತದಲ್ಲಿರುವ ಮನೆಗಳನ್ನು ಮಾ.22ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.

Congress Padayatre: ಕಾಂಗ್ರೆಸ್‌ ಪಾದಯಾತ್ರೆ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ ಸೋಮಣ್ಣ

ಈಗಾಗಲೇ ನೀಡಿರುವ ಸರ್ಕಾರಿ ಆದೇಶದಂತೆ(Government Order) ಮತ್ತು ನಿಯಮಾವಳಿಗಳಂತೆ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಸಭೆ ಮೂಲಕ ಆಯ್ಕೆ ಮಾಡಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಮುಚಿತ ಮಾರ್ಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಗನುಗುಣವಾಗಿ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಸಲ್ಲಿಸಬೇಕು. ಇನ್ನು 10 ತಿಂಗಳೊಳಗೆ ಮನೆಗಳ ನಿರ್ಮಾಣ ಮನೆಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಒಂದು ಲಕ್ಷ ಮನೆ ನಿರ್ಮಾಣಕ್ಕೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯ: ಸೋಮಣ್ಣ

ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ಬೆಂಗಳೂರಿನಲ್ಲಿ(Bengaluru) ನಿರ್ಮಿಸುತ್ತಿರುವ ಒಂದು ಲಕ್ಷ ಮನೆಗಳನ್ನು(Home) ಶೀಘ್ರವಾಗಿ ಪೂರ್ಣಗೊಳ್ಳಲು ಬಿಡಿಎ(BDA) ಸೇರಿದಂತೆ ಇತರೆ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದರು.

ಮಂಗಳವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಬಿಡಿಎ) ಒಂದು ಲಕ್ಷ ಮನೆಗಳ ನಿರ್ಮಾಣಕ್ಕೆ ಅವಶ್ಯಕವಿರುವ ಅಂಶಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಕ್ಷೆ ಮಂಜೂರಾತಿ, ಕಟ್ಟಡ ನಿರ್ಮಾಣ, ಕಾನೂನು ತೊಡಕುಗಳ ಪರಿಹಾರ ಕ್ರಮಗಳಲ್ಲಿ ಬಿಡಿಎ ಪಾತ್ರ ಮಹತ್ವದ್ದಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಗೋವಿಂದರಾಜ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗವಾಗಿ ಪೂರ್ಣಗೊಳಿಸಬೇಕು. ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪರಿಹರಿಸಬೇಕು ಎಂದು ಸೂಚಿಸಿದರು.

ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌(SR Vishwanath) ಮಾತನಾಡಿ, ಸಚಿವರು ಬಡವರಿಗಾಗಿ ಒಂದು ಲಕ್ಷ ಮನೆಗಳನ್ನು ನಿರ್ಮಿಸುವ ಯೋಜನೆ ಮಾಡಿದ್ದು, ಈ ಮಹತ್ವದ ಕಾರ್ಯದಲ್ಲಿ ಬಿಡಿಎ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.

Karnataka Politics : ಸಚಿವಗೆ ಸಿದ್ದರಾಮಯ್ಯ ನೇರ ಆಹ್ವಾನ

ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತಾ, ಬಿಡಿಎ ಆಯುಕ್ತ ಎಂ.ಬಿ.ರಾಜೇಶ್‌ಗೌಡ, ಎಂಜಿನಿಯರ್‌ ಸದಸ್ಯ ಶಾಂತರಾಜಣ್ಣ, ಆರ್ಥಿಕ ಸದಸ್ಯ ರಾಮಪ್ರಸಾದ್‌, ನಗರ ಯೋಜಕ ಧನಂಜಯ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ದೇವನಹಳ್ಳಿ ವ್ಯಾಪ್ತಿ ರೈಲ್ವೆ ಅಂಡರ್‌ಪಾಸಲ್ಲಿ ನೀರು ನಿಲ್ಲದಂತೆ ಕ್ರಮಕ್ಕೆ ಸಚಿವರ ಸೂಚನೆ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ(Devanahalli Assembly constituency) ಮಳೆಯಿಂದಾಗಿ(Rain) ರೈಲ್ವೆ ಸೇತುವೆಯ ಅಂಡರ್‌ಪಾಸ್‌ನಲ್ಲಿ ನೀರು ನಿಂತು ಸಾರ್ವಜನಿಕ ಸಂಚಾರಕೆ ಅಡಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇರಿಗೇನಹಳ್ಳಿ, ಹಾರೋಹಳ್ಳಿ, ಯರ್ಥಗಾನಹಳ್ಳಿ, ಐವಿಸಿ ರಸ್ತೆ ಮತ್ತು ಹಕ್ಕುಪೇಟೆ ಗ್ರಾಮದಲ್ಲಿನ ರೈಲ್ವೆ ರಸ್ತೆ ಕೆಳ ಸೇತುವೆಗಳ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ರೈಲ್ವೆ ಸೇತುವೆಯ ಅಂಡರ್‌ಪಾಸ್‌ನಲ್ಲಿ(Underpass) ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
 

Follow Us:
Download App:
  • android
  • ios