ಬೆಂಗಳೂರು (ಆ.22): ವೈದ್ಯಕೀಯ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸಲು ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಸಚಿವರು, ಸುಪ್ರೀಂಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ತೀರ್ಪು ನೀಡಿದ ಬಳಿಕ ಮೊದಲ ಬಾರಿಗೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ ಕೋರ್ಸ್‌ ಮುಗಿದ ಮೇಲೆ ಅವರನ್ನು ಸರ್ಕಾರಿ ವೈದ್ಯಕೀಯ ಸೇವೆಗೆ ಬಳಸಿಕೊಳ್ಳಲು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. 

ಬೆಂಗಳೂರು: ಲಕ್ಷದ ಅಂಚಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಈ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಿವಾಸಿ ವೈದ್ಯರು ಅಥವಾ ಆರೋಗ್ಯ ಇಲಾಖೆಯಲ್ಲಿ ತತ್ಸಮಾನ ಹುದ್ದೆ ನೀಡಲಾಗುತ್ತದೆ. ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.