ಸ್ಯಾಂಡಲ್ವುಡ್ನ ಜಲೀಲನ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ, ದರ್ಶನ್, ಶಾಸಕ ಸುರೇಶ್ ಕುಮಾರ್ ಸೇರಿದಂತೆ ಸಿನಿಮಾ ರಂಗದ ನಟ-ನಟಿಯರು ಹಾಗೂ ರಾಜಕೀಯ ಮುಖಂಡರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು, [ನ.24]: ಮಂಡ್ಯದ ಗಂಡು ಅಂಬರೀಶ್ ಇಂದು [ಶನಿವಾರ] ಹೃದಯಾಘಾತದಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸ್ಯಾಂಡಲ್ವುಡ್ನ ಜಲೀಲನ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ, ದರ್ಶನ್, ಶಾಸಕ ಸುರೇಶ್ ಕುಮಾರ್ ಸೇರಿದಂತೆ ಸಿನಿಮಾ ರಂಗದ ನಟ-ನಟಿಯರು ಹಾಗೂ ರಾಜಕೀಯ ಮುಖಂಡರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
Live Updates: ಕಂಠೀರವ ಸ್ಟೇಡಿಯಂನಲ್ಲಿ ಅಂಬಿ ಅಂತಿಮ ದರ್ಶನ
ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.ನಿಜವಾದ ಅರ್ಥದಲ್ಲಿ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿ. pic.twitter.com/Ibvdk8PzEM
— Siddaramaiah (@siddaramaiah) November 24, 2018
ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. pic.twitter.com/mZyCnAtkyM
— B.S. Yeddyurappa (@BSYBJP) November 24, 2018
ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ.
— Darshan Thoogudeepa (@dasadarshan) November 24, 2018
ಅಂಬರೀಷ್ ಅವರ ಅಗಲಿಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕರ್ನಾಟಕ ರಾಜ್ಯಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ, ಅಪಾರ ಬೆಂಬಲಿಗರಿಗೆ ಹಾಗೂ ನಾಡಿನ ಸಮಸ್ತ ಜನತೆಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.
— H D Devegowda (@H_D_Devegowda) November 24, 2018
