Asianet Suvarna News Asianet Suvarna News

ದಾಳಿಯಲ್ಲಿ ಭಾಗಿಯಾಗಿರುವ ಪ್ರತಾಪ್‌ ಸಿಂಹ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ, ಕಾಂಗ್ರೆಸ್‌ ಆಗ್ರಹ

ಲೋಕಸಭೆ ಭದ್ರತಾ ಲೋಪ ವಿಚಾರದಲ್ಲಿ ಆರೋಪಿಗಳು ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರಿಂದ ಪಾಸ್‌ ಪಡೆದಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ. ಇದರ ಬೆನ್ನಲ್ಲಿಯೇ ಕರ್ನಾಟಕ ಕಾಂಗ್ರೆಸ್‌ ಪ್ರತಾಪ್‌ ಸಿಂಹ ಕೂಡ ದಾಳಿಯಲ್ಲಿ ಭಾಗಿಯಾಗಿದ್ದು ತನಿಖೆ ಮುಗಿಯುವವರೆಗೂ ಅವರನ್ನು ಸಂಸತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.

Congress demand Pratap simha suspend reagding Lok sabha attack san
Author
First Published Dec 13, 2023, 5:27 PM IST

ಬೆಂಗಳೂರು (ಡಿ.13): ಈ ಸಂಸತ್‌ ದಾಳಿಯ ಹಿಂದೆ ಪ್ರತಾಪ್‌ ಸಿಂಹ ಅವರ ಪ್ರಮುಖ ಪಾತ್ರವಿದೆ ಹಾಗಾಗಿ ತನಿಖೆ ಮುಗಿಯುವವರೆಗೂ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ವಜಾ ಮಾಡಿ ಎಂದು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಅದರೊಂದಿಗೆ ಇಡೀ ಭದ್ರತಾ ಲೋಪಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ದೂಷಿಸಿದೆ. ಬುಧವಾರ ಲೋಕಸಭೆಯಲ್ಲಿ ಸಂಸತ್‌ ಕಲಾಪದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನಕ್ಕೆ ನುಗ್ಗಿ ಸ್ಮೋಕ್‌ ಬಾಂಬ್‌ ಸಿಡಿಸಿದ್ದರು. ಇದೇ ವೇಳೆ ಇಬ್ಬರನ್ನು ಹಿಡಿದ ಕೆಲ ಸಂಸದರು ಅಲ್ಲಿಯೇ ಅವರನ್ನು ಥಳಿಸಿದ್ದಾರೆ. ಇದರ ಬೆನ್ನಲ್ಲಿಯೇ ಲೋಕಸಭೆಯ ಹೊರಗಡೆ ಇನ್ನಿಬ್ಬರು ವ್ಯಕ್ತಿಗಳು ಇದೇ ರೀತಿ ಟಿಯರ್‌ ಗ್ಯಾಸ್‌ ಸಿಡಿಸಿದ್ದರು. ಇದು ಆತಂಕಕ್ಕೆ ಕಾರಣವಾಗಿತ್ತು. ದೇಶಾದ್ಯಂತ ಈ ವಿಚಾರ ಸುದ್ದಿಯಾದ ಕೆಲವೇ ಹೊತ್ತಿನಲ್ಲಿ ಆರೋಪಿಯೊಬ್ಬನ ಬಳಿ ಸಂಸತ್‌ ಒಳಹೋಗಲು ಸಂಸದ ಪ್ರತಾಪ್‌ ಸಿಂಹ ಅವರ ಹೆಸರಿದ್ದ ಪಾಸ್‌ ಸಿಕ್ಕಿದ್ದು ವರದಿಯಾಗಿತ್ತು. ಇದನ್ನೇ ಕಾಂಗ್ರೆಸ್‌ ಅಸ್ತ್ರವನ್ನಾಗಿ ಮಾಡಿಕೊಂಡಿದ್ದು, ತನಿಖೆ ಮುಗಿಯುವವರೆಗೆ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದೆ.

' 300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ. ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು  ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ ಬಿರ್ಲಾ ಅವರು ಕೂಡಲೇ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು' ಎಂದು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ಸಂಸತ್ ಭವನದ ಭದ್ರತಾ ವೈಫಲ್ಯಕ್ಕೆ ಸಿದ್ದರಾಮಯ್ಯ ಖಂಡನೆ, ಪ್ರತಾಪ ಸಿಂಹರನ್ನು ವಿಚಾರಣೆ ನಡೆಸಲು ಆಗ್ರಹ

ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು  ಪ್ರತಾಪ್‌ ಸಿಂಹ  ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯಲ್ಲಿ ಲೋಪವೂ ನಡೆಯುತ್ತಿರುವುದೇಕೆ? ಸಂಸತ್ ಭವನದೊಳಗೆ ಟಿಯರ್ ಗ್ಯಾಸ್ ಸ್ಪೋಟಿಸಿದ ಆಗಂತುಕರಿಗೆ ಅಕಸ್ಮಾತ್ ಕಾಂಗ್ರೆಸ್ ಸಂಸದರಿಂದ ಪಾಸ್ ಸಿಕ್ಕಿದಿದ್ದರೆ ಬಿಜೆಪಿಗರು ಹೇಗೆ ವರ್ತಿಸುತ್ತಿದ್ದರು? ಈಗೇಕೆ ಬಿಜೆಪಿ ನಾಯಕರು ಏನೂ ಆಗಿಯೇ ಇಲ್ಲ ಎಂಬಂತೆ ಮುಗುಮ್ಮಾಗಿದ್ದಾರೆ? ಭದ್ರತಾ ಲೋಪದ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚದಿರುವುದೇಕೆ? ದೇಶ ರಕ್ಷಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಲ್ಲವೇ? ಎಂದು ಬಿಜೆಪಿಗೆ ಟ್ಯಾಗ್‌ ಮಾಡಿ ಕರ್ನಾಟಕ ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಸಂಸತ್ ದಾಳಿಯಿಂದ ಪ್ರೇಕ್ಷಕರ ಪಾಸ್ ರದ್ದು, ಬೆಳಗಾವಿ ಸುವರ್ಣಸೌಧದಲ್ಲಿ ಹೈ ಅಲರ್ಟ್!

Follow Us:
Download App:
  • android
  • ios