ಬೆಂಗಳೂರು: ಬಿಜೆಪಿಯವರು ಎಷ್ಟೇ ಪ್ರಯತ್ನ ನಡೆಸಿದರೂ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. 

ಬಿಜೆಪಿಯ ಹುಸಿ ಭರವಸೆ ನಂಬಿಕೊಂಡು ಪಕ್ಷದೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾಂಗ್ರೆಸ್‌ನ ಅತೃಪ್ತ ಶಾಸಕರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. 

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ಉರುಳಿಸಲು ಏನೆಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. 

ಎಷ್ಟೆಲ್ಲಾ ಆಟ ಆಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಬಿಜೆಪಿ ಎಷ್ಟೇ ಆಟವಾಡಿದರೂ ಸರ್ಕಾರವನ್ನು ಅಲುಗಾಡಲ್ಲ ಎಂದರು.