ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಡೋಂಟ್‌ಕೇರ್ : ಡಿಕೆ ಶಿವಕುಮಾರ
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚಿಂತೆಯಿಲ್ಲ. ನಾವು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಜನರ ಮನಸ್ಸು ಗೆದ್ದಿದ್ದೇವೆ. ನಮ್ಮ ಕೆಲಸ ಮುಂದಿಟ್ಟು ಮತ ಕೇಳುತ್ತೇವೆ. ಹೀಗಾಗಿ ಅವರೆಡೂ ಪಕ್ಷಗಳ ಮೈತ್ರಿಯಾದರೂ ಕಾಂಗ್ರೆಸ್ಸಿಗೇ ಅನುಕೂಲ’ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಸೆ.9) : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚಿಂತೆಯಿಲ್ಲ. ನಾವು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಜನರ ಮನಸ್ಸು ಗೆದ್ದಿದ್ದೇವೆ. ನಮ್ಮ ಕೆಲಸ ಮುಂದಿಟ್ಟು ಮತ ಕೇಳುತ್ತೇವೆ. ಹೀಗಾಗಿ ಅವರೆಡೂ ಪಕ್ಷಗಳ ಮೈತ್ರಿಯಾದರೂ ಕಾಂಗ್ರೆಸ್ಸಿಗೇ ಅನುಕೂಲ’ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಗ್ಯಾರಂಟಿಗಳ ಅನುಷ್ಠಾನ ಹಾಗೂ ಅಭಿವೃದ್ಧಿಪರ ಯೋಜನೆಗಳ ಮೂಲಕ ಜನರ ಮನಸ್ಸು ಗೆದ್ದಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ. ಹೀಗಾಗಿ ನಾವು ಜನರ ಹತ್ತಿರ ಮತ ಕೇಳುತ್ತೇವೆ. ಜನರು ಲೋಕಸಭೆ ಚುನಾವಣೆಯಲ್ಲೂ ಆಶೀರ್ವಾದ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಆಲ್ ದಿ ಬೆಸ್ಟ್- ಡಿಕೆಶಿ ವ್ಯಂಗ್ಯ:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಜೆಡಿಎಸ್-ಬಿಜೆಪಿ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ಒಂದಾಗಲಿ ಬಿಡಿ ಅವರಿಬ್ಬರ ಹೊಂದಾಣಿಕೆಗೂ ಆಲ್ ದಿ ಬೆಸ್ಟ್ ಎಂದಷ್ಟೇ ಹೇಳುತ್ತೇನೆ. ಆದರೆ ಅವರ ನೆಚ್ಚಿಕೊಂಡ ಸಿದ್ಧಾಂತಗಳು ಏನಾಗುತ್ತವೆ ಎಂಬುದಷ್ಟೇ ನನ್ನ ಕುತೂಹಲ’ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದ ಸಂಸದ ಬಚ್ಚೇಗೌಡ!
‘ ಈ ಹಿಂದೆ ಕುಮಾರಸ್ವಾಮಿ ಹಾಗೂ ಆಶೋಕ್ ಅವರು ಒಂದಾಗಿದ್ದರು. ಈಗ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಅವರು ಒಂದಾಗುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಯಾರೇ ಒಂದಾದರೂ ನಮಗೆ ಸಂತೋಷ. ಹಿರಿಯರಾದ ದೇವೆಗೌಡರು ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೋಗುವುದಿಲ್ಲ ಎಂದಿದ್ದರು. ಒಂದು ಸಿದ್ಧಾಂತ ಇಟ್ಟುಕೊಂಡು ಪಕ್ಷ ಕಟ್ಟಿರುತ್ತಾರೆ, ಈಗ ಆ ಪಕ್ಷ ಉಳಿಯುತ್ತದೊ ಏನಾಗುತ್ತದೊ ಗೊತ್ತಿಲ್ಲ? ಹಾಲಿ ಶಾಸಕರು, ಮಾಜಿ ಶಾಸಕರು ಏನಾಗುತ್ತಾರೊ ಅದರ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಹೇಳಿದರು.
‘ಜೆಡಿಎಸ್ ಜೊತೆ ನಾವು ಮೈತ್ರಿ ಮಾಡಿಕೊಂಡು ಅನುಭವ ಪಡೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಮೈತ್ರಿ ಕಾಂಗ್ರೆಸ್-ಜೆಡಿಎಸ್ ಮದ್ಯೆ ಆಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ಸಿಗೆ ಅನುಕೂಲ: ಎಂ.ಬಿ. ಪಾಟೀಲ್
ಸಚಿವ ಎಂ.ಬಿ. ಪಾಟೀಲ್ ಮಾತನಾಡಿ,ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ. ಬಿಜೆಪಿ-ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಆದರೆ ಅವರು ಒಂದಾದರೆ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ಜೆಡಿಎಸ್ ಜ್ಯಾತ್ಯಾತೀತತೆ ಬಣ್ಣ ಬಯಲಾಗಲಿದೆ. ಎರಡೂ ಪಕ್ಷ ಏನೇ ಮಾಡಿಕೊಂಡರೂ ನಾವು ಏಕಾಂಗಿಯಾಗಿ ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.\
ರಾಜ್ಯದಲ್ಲಿ ದುರ್ಬಲವಾದ ಎರಡು ಪಕ್ಷಗಳು ಒಂದಾಗಿವೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಶೆಟ್ಟರ್ ವ್ಯಂಗ್ಯ
ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷವು ಈಗಾಗಲೇ ಮುಳುಗಿ ಹೋಗಿರುವ ಹಡಗು. ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ. ಬಿಜೆಪಿ ಯಡಿಯೂರಪ್ಪ ಅವರಂತಹ ಹಿರಿಯರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ. ಇದು ಅವರಿಗೂ ಗೊತ್ತು. ಆದರೂ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ವಾಗ್ದಾಳಿ ನಡಸಿದರು.