ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಅನಿಮೇಟೆಡ್‌ ವಿಡಿಯೋ ಪೋಸ್ಟ್‌ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ರಾಜ್ಯ ಕಾಂಗ್ರೆಸ್‌ ದೂರು ನೀಡಿದೆ.

ಬೆಂಗಳೂರು (ಜೂ.20) ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಅನಿಮೇಟೆಡ್‌ ವಿಡಿಯೋ ಪೋಸ್ಟ್‌ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ರಾಜ್ಯ ಕಾಂಗ್ರೆಸ್‌ ದೂರು ನೀಡಿದೆ.

ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲ ತಾಣ(BJP National Social media) ವಿಭಾಗದ ಅಧ್ಯಕ್ಷ ಅಮಿತ್‌ ಮಾಳವಿಯಾ(Amit malaviya), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,(JP Nadda) ಚಂಡೀಗಡÜ ಬಿಜೆಪಿ ಸಾಮಾಜಿಕ ಜಾಲ ತಾಣ ವಿಭಾಗದ ರಾಜ್ಯಾಧ್ಯಕ್ಷ ಅರುಣ್‌ ಸೂದ್‌(Arun sood) ವಿರುದ್ಧ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ(Priyanka kharge) ಮತ್ತು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು ಅವರು ಹೈಗ್ರೌಂಡ್‌್ಸ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದು ಕ್ರಮ ಕೈಗೊಳ್ಳಬೇಕು ಎಂದು ಒತ್ತಾ ಯಿಸಿದರು.

ರಾಹುಲ್‌ ಗಾಂಧಿ ಹಾರ್ವರ್ಡ್‌, ಕೇಂಬ್ರಿಡ್ಜ್‌ನಿಂದ ಪದವಿ ಪಡೆದಿದ್ದಾರೆ, ಆದರೂ ಪಪ್ಪು ಅಂತೀರಿ: ಪ್ರಿಯಾಂಕಾ ಗಾಂಧಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ಜೂ.17ರಂದು ಅಮಿತ್‌ ಮಾಳವಿಯಾ ಅವರು ತಮ್ಮ ಖಾತೆಯಲ್ಲಿ ಅನಿಮೇಟೆಡ್‌ ವಿಡಿಯೋ ಪೋಸ್ಟ್‌ ಮಾಡಿದ್ದು, ಅದರಲ್ಲಿ ಕಾಂಗ್ರೆಸ್‌ ಪಕ್ಷ ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿದೆ. ರಾಹುಲ… ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಹಾಗೂ ರಾಹುಲ… ಗಾಂಧಿ ದೇಶ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿದರು.

ಅಮಿತ್‌ ಮಾಳವಿಯ ಅವರು ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್‌ ಪಕ್ಷ ಹೇಗೆ ದೇಶ ವಿರೋಧಿ ಚಟುವಟಿಕೆ ಮಾಡುತ್ತಿದೆ ಎಂದು ಹೇಳಲಿ. ಇಲ್ಲದಿದ್ದರೆ, ಕ್ಷಮೆ ಕೇಳಿ, ಮುಂದೆ ಇಂತಹ ಸುಳ್ಳು ಪ್ರಚಾರ ಮಾಡುವುದಿಲ್ಲ ಎಂದು ಪತ್ರ ಬರೆದುಕೊಡಬೇಕು. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಸುಳ್ಳು ಸುದ್ದಿ ಹರಡುತ್ತಿತ್ತು. ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಲು ಮುಖ್ಯಮಂತ್ರಿ, ಗೃಹ ಸಚಿವರೊಂದೊಂದಿಗೆ ಚರ್ಚಿಸಿದ್ದು ಗೃಹ ಸಚಿವಾಲಯದ ಸಲಹೆ ಪಡೆದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

40 ಪರ್ಸೆಂಟ್ ಆರೋಪ; ಸಿಎಂ ಸಿದ್ದು, ಡಿಕೆಶಿ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್!

ಸುಳ್ಳಿನ ಫ್ಯಾಕ್ಟರಿ ಬಂದ್‌: ಪ್ರಿಯಾಂಕ್‌

ಬಿಜೆಪಿ ಐಟಿ ಸೆಲ್‌ನ ಸುಳ್ಳಿನ ಫ್ಯಾಕ್ಟರಿಯನ್ನು ರಾಜ್ಯದಲ್ಲಿ ಬಂದ್‌ ಮಾಡಲು ತೀರ್ಮಾನಿಸಿದ್ದೇವೆ. ಬಿಜೆಪಿಯವರು ಸದಾ ಕೋಮು ವಿಷಬೀಜ ಬಿತ್ತಿ, ಸುಳ್ಳನ್ನು ನಿಜ ಎಂದು ಬಿಂಬಿಸುವುದು, ಸಮಾಜದಲ್ಲಿ ಭೀತಿ ಸೃಷ್ಟಿಸುವುದೇ ಇವರ ಕೆಲಸವಾಗಿದೆ. ಸುಳ್ಳು ಮಾಹಿತಿ ನೀಡಿ ಕಾನೂನು ಸುವ್ಯವಸ್ಥೆ ಕದಡಲು ಪ್ರಯತ್ನಿಸುವವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದರು.