ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!
ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು.
ಹುಬ್ಬಳ್ಳಿ (ಜೂ.30): ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು.
ರಾಜ್ಯದಲ್ಲಿ ಸಿಎಂ, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಅದು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಪತನವೂ ಆಗಬಹುದು. ಅದು ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗುತ್ತೆ. ಆದರೆ ಯಾವಾಗ ಅನ್ನೋದು ಹೇಳಲು ಬರೋದಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಕೈಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ: ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದೇನು?
ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನ ಮುಚ್ಚಿಹಾಕಲು ಬಿಜೆಪಿ ಮೇಲೆ ಬೆರಳು ತೋರಿಸುತ್ತಿದೆ. ಸರ್ಕಾರದ ವ್ಯಾಪ್ತಿಯಲ್ಲೇ ಹಗರಣಗಳನ್ನು ಮುಚ್ಚಿಹಾಕುವ ಕೆಲಸಗಳನ್ನ ಸರ್ಕಾರ ಮಾಡುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಕೇವಲ ನಾಗೇಂದ್ರ ಅವರ ತಲೆದಂಡ ಆಯ್ತು ಮತ್ತೇನೂ ಬೆಳವಣಿಗೆ ಆಗಿಲ್ಲ. ನೆಪಮಾತ್ರಕ್ಕೆ ತನಿಖೆ ನಡೆಯುತ್ತಿದೆ. ಆದರೆ ಅದರಿಂದ ಹೆಚ್ಚಿನ ನಿರೀಕ್ಷೆಯೇನು ಇಲ್ಲ. ಸರ್ಕಾರ ಈ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ ಸಿಎಂ ಡಿಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.