Asianet Suvarna News Asianet Suvarna News

ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ: ಜೋಶಿ ಕಿಡಿ

ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿಯ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಆರೋಪಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ 

Congress government is literally making Karnataka Pakistan says Union Minister Pralhad Joshi grg
Author
First Published Sep 13, 2024, 9:45 AM IST | Last Updated Sep 13, 2024, 9:45 AM IST

ನವದೆಹಲಿ(ಸೆ.13):  ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ. ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ನೋಡಿ ಎಂದರು. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ? ಆ ರೀತಿ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಮಹದಾಯಿ ಯೋಜನೆ ಜಾರಿಗೆ ಬಿಜೆಪಿ ಬದ್ಧ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿಯ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios