Asianet Suvarna News Asianet Suvarna News

ಕಾಂಗ್ರೆಸ್ ಸರ್ಕಾರದ ಮತ್ತೊಂದು ನಿಗಮದಲ್ಲಿ ಅವ್ಯವಹಾರ; ಅಧಿಕಾರಿಗಳನ್ನೇ ಕಿತ್ತೆಸೆದ ಸಚಿವ ಪಾಟೀಲ್

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ನಿಗಮದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ಎಚ್ಚೆತ್ತುಕೊಂಡ ಸಚಿವ ಹೆಚ್.ಕೆ. ಪಾಟೀಲ್ ಸರ್ಕಾರಿ ಸಿಬ್ಬಂದಿಯನ್ನು ಸೇವೆಯಿಂದ ಕಿತ್ತೆಸೆದಿದ್ದಾರೆ.

Congress govt another one corporation Misconduct KSTDC Minister HK Patil suspended officials sat
Author
First Published Jun 19, 2024, 6:00 PM IST | Last Updated Jun 19, 2024, 6:00 PM IST

ಬೆಂಗಳೂರು (ಜೂ.19): ಈಗಾಗಲೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯಹಾರ ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಇದರ ಬೆನ್ನಲ್ಲಿಯೇ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿಯೂ (ಕೆಎಸ್‌ಟಿಡಿಸಿ) ದೊಡ್ಡ ಮಟ್ಟದ ಹಗರಣ ನಡೆದಿದೆ. ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವ್ಯವಹಾರ ಮಾಡಿದ ಅಧಿಕಾರಿಗಳನ್ನು ಕಿತ್ತೆಸೆದಿದ್ದಾರೆ.

ರಾಜ್ಯ ಸರ್ಕಾರದ ಮತ್ತೊಂದು ನಿಗಮದಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮಯೂರ ಬಾಲ ಭವನದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಿಬ್ಬಂದಿ ಅವ್ಯವಹಾರ ಮಾಡಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ ಕ್ಯೂ ಆರ್ ಕೋಡ್ ಕೊಡದೇ ನಾಲ್ವರು ಸಿಬ್ಂದಿಯೂ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಕೊಟ್ಟಿದ್ದಾರೆ. ಪ್ರವಾಸಿಗರು ಸರ್ಕಾರದ ಸೇವೆಯನ್ನು ಬಳಸಿ ಹಣ ಪಾವತಿಸಿದರೆ ನೇರವಾಗಿ ಭ್ರಷ್ಟ ಅಧಿಕಾರಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆ. ಈ ಮೂಲಕ ಪ್ರವಾಸೋದ್ಯಮ ಇಲಾಖೆಯ ಸಂಸ್ಥೆಗೆ ಸೇರಬೇಕಿದ್ದ ಹಣವನ್ನು ಸಿಬ್ಬಂದಿ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ.

ನಾನು 1ರಿಂದ 4ನೇ ಕ್ಲಾಸ್ ಓದಿಲ್ಲ, ಡೈರೆಕ್ಟ್ 5ನೇ ಕ್ಲಾಸಿಗೆ ಶಾಲೆಗೆ ಸೇರಿದೆ; ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಹಣದ ಅವ್ಯವಹಾರ ಆಗಿರುವುದು ತಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಪ್ರವಾಸೋದ್ಯಮ ಸಚಿವ ಎಚ್.ಕೆ‌ ಪಾಟೀಲ್ ಅಧಿಕಾರಿಗಳನ್ನು ಅಮಾನತು ಮಾಡಿದರೆ, ಗುತ್ತಿಗೆ ಸಿಬ್ಬಂದಿಯನ್ನು ಸೇವೆಯಿಂದ ಕಿತ್ತೆಸೆದಿದ್ದಾರೆ. ಇನ್ನು ಈ ಬಗ್ಗೆ ಹಣ ದುರುಪಯೋಗ‌ ದೃಢಪಟ್ಟಿದ್ದಲ್ಲದೇ, ಸಿಬ್ಬಂದಿ ಕೂಡ ತಪ್ಪೊಪ್ಪಿಕೊಂಡಿದ್ದಾರೆ. ಇದರಲ್ಲಿ ಇಬ್ಬರು ಸರ್ಕಾರಿ ನೌಕರರಾಗಿದ್ದರೆ, ಉಳಿದ ಇಬ್ಬರು ಗುತ್ತಿಗೆ ಆಧಾರದಲ್ಲಿ ಪ್ರವಾಸೋದ್ಯಮ ಇಲಾಖೆಯ ಮಯೂರ ಬಾಲಭವನದಲ್ಲಿ ಕೆಲಸ ಮಾಡಲು ಗುತ್ತಿಗೆ ಆಧಾರದಲ್ಲಿ ಒಂದು ವರ್ಷಕ್ಕೆ ಸೇವೆಗೆ ಬಂದಿದ್ದ ಸಿಬ್ಬಂದಿ ಆಗಿದ್ದಾರೆ. ಅವ್ಯವಹಾರ ನಡೆಸಿದ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸಚಿವ ಹೆಚ್.ಕೆ. ಪಾಟೀಲ್ ಸೂಚನೆ ನೀಡಿದ್ದಾರೆ. 

ವೈಯಕ್ತಿಕ ಬ್ಯಾಂಕ್ ಖಾತೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಅವ್ಯವಹಾರ:
ಕೆ.ರಾಮಚಂದ್ರ - ದ್ವಿತೀಯ ದರ್ಜೆ ಸಹಾಯಕ = 31,917 ರೂ. ಅವ್ಯವಹಾರ (ಸೇವೆಯಿಂದ ವಜಾ)
ವೆಂಕಟೇಶ್- ಸಹಾಯಕ ಉಗ್ರಾಣಿಕ = 48,658 ರೂ. ಅವ್ಯವಹಾರ (ಅಮಾನತು)
ಅಬ್ದುಲ್ ವಾಜಿದ್ - ವಾಹನ ಚಾಲಕ = 2,66,000 ರೂ. ಅವ್ಯವಹಾರ (ಅಮಾನತು)
ಕೋದಂಡರಾಮ - ಸಹಾಯಕ ಪರಿಚಾರಿಕ = 3,920 ರೂ. ಅವ್ಯವಹಾರ (ಸೇವೆಯಿಂದ ವಜಾ)

ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು ಕೊಡಬಹುದಲ್ವಾ.? ಪವಿತ್ರಾಗೌಡ ಮಾಜಿ ಪತಿ ಸಂಜಯ್ ಸಿಂಗ್

ರಾಜ್ಯ ಸರ್ಕಾರಕ್ಕೆ ಮುಖಭಂಗವಾಗುವ ಕೆಲಸಗಳನ್ನು ಮಾಡದೇ ಶಾಸಕರು ಹಾಗೂ ಸಚಿವರು ಮಾಡದಿದ್ದರೂ, ಸರ್ಕಾರಿ ಸೇವೆ ಮಾಡುವ ಅಧಿಕಾರಿಗಳು ಮಾತ್ರ ಭ್ರಷ್ಟಾಚಾರದಲ್ಲಿ ಮುಳುಗಿ ತೇಲಾಡುತ್ತಿದ್ದಾರೆ ಎನ್ನುವುದಕ್ಕೆ ಮತ್ತೊಂದು ಜ್ವಲಂತ ಸಾಕ್ಷಿ ಸಿಕ್ಕಿದೆ. ಇಂತಹ ಭ್ರಷ್ಟ ಅಧಿಕಾರಿಗಳಿಂದಲೇ ಸರ್ಕಾರ ಹಾಗೂ ಸಚಿವರಿಗೆ ತೀವ್ರ ಮುಖಭಂಗ ಉಂಟಾಗುತ್ತಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಣವನ್ನು ಬೇನಾಮಿ ಖಾತೆಗಳಿಗೆ ವರ್ಗಾವಣೆ ಮಾಡಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುತ್ತಿದ್ದರು. ಹಿರಿಯ ಅಧಿಕಾರಿಗಳ ಭ್ರಷ್ಟಾಚಾರ ತನ್ನ ಮೇಲೆ ಬರುತ್ತದೆಂಬ ಭಯದಿಂದ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲಿಯೇ ತನಿಖೆ ನಡೆಯುತ್ತಿರುವಾಗಲೇ ಸಚಿವ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

Latest Videos
Follow Us:
Download App:
  • android
  • ios