ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಯಲ್ಲಿ ಶೇಕಡಾ 50 ರಷ್ಟು ಪುರುಷರಿಗೆ ರಿಸರ್ವೇಶನ್ ನೀಡಿದೆ. ರಾಜ್ಯ ಸರ್ಕಾರದ ಉಚಿತ ಗ್ಯಾರೆಂಟಿ ಯೋಜನೆಗಳ ಪೈಕಿ ಇದೀಗ ಉಚಿತ ಬಸ್ ಪ್ರಯಾಣ ಹೆಚ್ಚು ಟ್ರೋಲ್ ಆಗಿದೆ.

ಬೆಂಗಳೂರು(ಜೂನ್ 03): ಕಾಂಗ್ರೆಸ್ ಚುನಾವಣೆ ವೇಳೆ ಘೋಷಣೆ ಮಾಡಿದ ಐದು ಗ್ಯಾರೆಂಟಿ ಯೋಜನೆಯನ್ನು ಜಾರಿಗೊಳಿಸಿದೆ. ಇದರಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಅತೀ ಹೆಚ್ಚು ಟ್ರೋಲ್ ಆಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಘೋಷಿಸಿದೆ. ಉಚಿತ ಅನ್ನೋ ಕಾರಣಕ್ಕೆ ಪುರುಷರಿಗೆ ಸೀಟು ಸಿಗದೇ ಇರುವ ಸಾಧ್ಯತೆಯೂ ಇದೆ. ಹೀಗಾಗಿ ದೇಶದಲ್ಲೇ ಮೊದಲ ಬಾರಿಗೆ ಗಂಡಸರಿಗೆ ಶೇಕಡಾ 50 ರಷ್ಟು ರಿಸರ್ವೇಶನ್ ಕೂಡ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಈ ಯೋಜನೆ ಘೋಷಣೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ. ಹಲವರು ರಾಜ್ಯ ಸಾರಿಗೆ ಸಂಸ್ಥೆ ಬಸ್ ಬೋರ್ಡ್‌ನಲ್ಲಿ ಗಂಡಸರಿಗೆ ಮಾತ್ರ ಎಂದು ಹಾಕಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಜೂನ್ 11 ರಿಂದ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರೆ ತುಂಬಿಕೊಂಡಿರುತ್ತಾರೆ. ಹೀಗಾಗಿ ಪುರುಷರಿಗೆ ಬಸ್ ಸೀಟಿನ ಮಾತು ಪಕ್ಕಕ್ಕಿರಲಿ, ಬಸ್ ಹತ್ತಲು ಸಾಧ್ಯವಾಗುವುದಿಲ್ಲ. ಪುರುಷರೇ ಎಚ್ಚೆತ್ತುಕೊಳ್ಳಿ ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಇತ್ತ ಪುರುಷರು ಇನ್ನೂ ಮಹಿಳಾ ವೇಷದಲ್ಲಿ ಪ್ರಯಾಣ ಮಾಡುವ ಸಾಧ್ಯತೆ ಇದೆ ಎಚ್ಚರಿಕೆ ಎಂದು ಸರ್ಕಾರಕ್ಕೆ ಕಿವಿ ಮಾತು ನೀಡಿದ್ದಾರೆ.

ಮಹಿಳೆಯರಿಗೆ ಗ್ಯಾರೆಂಟಿ ಉಚಿತ ಪ್ರಯಾಣ, ಫ್ರೀ ಬಸ್ ಟಿಕೆಟ್ ಬುಕಿಂಗ್ ಮಾಡುವುದು ಹೇಗೆ?

ಮಹಿಳೆಯರಿಗೆ ಉಚಿತ ಪ್ರಯಾಣದ ಕಾರಣ, ಹೆಂಡತಿ ಪದೇ ಪದೇ ತವರು ಮನೆಗೆ ಹೋಗುತ್ತಾರೆ. ಹಾಗಂತ ದಬಾಯಿಸಿದರೆ ಮನೆಯ ಯಜಮಾನಿಗೆ ಸಿಗುವ 2,000 ರೂಪಾಯಿಯಲ್ಲಿ ನಿಮಗೆ ಒಂದು ರೂಪಾಯಿ ಸಿಗುವುದಿಲ್ಲ. ಹೀಗಾಗಿ ಹೆಂಡತಿಯನ್ನು ಚೆನ್ನಾಗಿ ನೋಡಿಕೊಂಡರೆ ಲಾಭ ಇದೆ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಸಲಹೆ ನೀಡಿದ್ದಾರೆ.

ಫ್ರೀ ಬಸ್‌ನಿಂದ ಎಲ್ಲಾ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಇನ್ನೂ ಮಹಿಳೆಯರೇ ತುಂಬಿಕೊಳ್ಳಲಿದ್ದಾರೆ. ಪುರುಷರು ಆಟೋ, ಖಾಸಗಿ ಬಸ್ ಮೂಲಕವೇ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಯಾವುದಕ್ಕೂ ರೆಡಿಯಾಗಿರಿ ಎಂದು ರಾಜ್ಯದ ಪುರುಷರಿಗೆ ಸಲಹೆ ನೀಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣ ಹೆಚ್ಚು ಟ್ರೋಲ್ ಆಗುತ್ತಿದೆ.

ಐದು ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜೂನ್ 11 ರಿಂದ ಜಾರಿಯಾಗುತ್ತಿದೆ. ಇದರಿಂದ ಪುರುಷ ಪ್ರಯಾಣಿಕರಿಗೆ ಸಮಸ್ಯೆಯಾಗಬಾರದು ಎಂದು ಸಾಮಾನ್ಯ ಸಾರಿಗೆ ಬಸ್‌ನಲ್ಲಿ ಶೇಕಡಾ 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಈ ರೀತಿ ಪುರುಷರಿಗೆ ಶೇ.50ರಷ್ಟುಆಸನ ಮೀಸಲು ವ್ಯವಸ್ಥೆ ತಂದ ದೇಶದ ಮೊದಲ ರಾಜ್ಯ ಎಂಬ ಘನತೆಗೆ ಕರ್ನಾಟಕ ಪಾತ್ರವಾಗಲಿದೆ.

Scroll to load tweet…

ಇಷ್ಟು ದಿನ ಸಾರಿಗೆ ಸಂಸ್ಥೆ ಬಸ್‌ಗಳ ಆಸನದ ಮೇಲೆ ಮಹಿಳೆಯರಿಗೆ ಮಾತ್ರ, ವಿಶೇಷ ಚೇತನರಿಗೆ, ಸ್ವಾತಂತ್ರ್ಯ ಯೋಧರಿಗೆ ಸೇರಿದಂತೆ ಕೆಲ ಆಸನಗಳು ಮೀಸಲಾಗಿತ್ತು. ಇನ್ನು ಮುಂದೆ ಬಸ್‌ನಲ್ಲಿ ಶೇಕಡಾ 50 ರಷ್ಟು ಪುರಷರಿಗೆ ಮೀಸಲು ಎಂಬ ಫಲಕ ಕಾಣಿಸಿಕೊಳ್ಳಲಿದೆ. ಜೂ.11ರಿಂದ ‘ಶಕ್ತಿ’ ಯೋಜನೆಯಡಿ ಕೆಎಸ್‌ಆರ್‌ಟಿಸಿ, ನಗರ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಜಾರಿಯಾಗಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟುಸೀಟುಗಳನ್ನು ಪುರುಷರಿಗೆ ಮೀಸಲಿಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.