ಅನುದಾನದ ವಿಚಾರಕ್ಕೆ ಕಾಂಗ್ರೆಸ್ ದ್ವೇಷದ ರಾಜಕಾರಣ: ಬಿಎಸ್‌ವೈ
ಅನುದಾನದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯುೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಬಿಜೆಪಿ ಸರ್ಕಾರ ನೀಡಿದ ಅನುದಾನವನ್ನು ರದ್ದುಗೊಳಿಸಿದ ಕಾಂಗ್ರೆಸ್ ಸರ್ಕಾರ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಶಾಸಕ ಮುನಿರತ್ನ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ಬೆಂಬಲ ಸೂಚಿಸಿದರು

ಬೆಂಗಳೂರು (ಅ.12) : ಅನುದಾನದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯುೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಬಿಜೆಪಿ ಸರ್ಕಾರ ನೀಡಿದ ಅನುದಾನವನ್ನು ರದ್ದುಗೊಳಿಸಿದ ಕಾಂಗ್ರೆಸ್ ಸರ್ಕಾರ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಶಾಸಕ ಮುನಿರತ್ನ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ಬೆಂಬಲ ಸೂಚಿಸಿದರು.
ಶಾಸಕ ಮುನಿರತ್ನಗೆ ಡಬಲ್ ಟ್ರಬಲ್: ಸರ್ಕಾರದ ಅನುದಾನವೂ ಇಲ್ಲ, ವಿದ್ಯಾ ಹಿರೇಮಠ್‌ಳಿಂದ ಮರ್ಯಾದೆಯೂ ಇಲ್ಲ
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ನಡೆಯೂ ಮೇಲ್ನೋಟಕ್ಕೆ ದ್ವೇಷದ ರಾಜಕಾರಣ ಎಂಬುದು ಗೊತ್ತಾಗುತ್ತದೆ. ಎಲ್ಲರಿಗೂ ಅನುದಾನ ನೀಡಿದಂತೆ ಆರ್.ಆರ್.ನಗರ ಕ್ಷೇತ್ರಕ್ಕೆ ಅನುದಾನ ನೀಡುವ ಕುರಿತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ. ಬಿಜೆಪಿ ಸರ್ಕಾರ ನೀಡಿದ ಅನುದಾನ ರದ್ದು ಮಾಡಿ ಸೇಡಿನ ರಾಜಕಾರಣ ಮಾಡಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ. ಒಬ್ಬರೇ ಧರಣಿ ಮಾಡುವುದು ಬೇಡ. ನಾವೆಲ್ಲರೂ ಮುನಿರತ್ನ ಜತೆಗಿದ್ದು, ಪ್ರತಿಭಟನೆ ಕೈ ಬಿಡುವಂತೆ ತಿಳಿಸಿದ್ದೇನೆ ಎಂದರು.