ಚುನಾವಣಾ ಕಣ ರಂಗೇರುತ್ತಿದ್ದು ಈ ನಿಟ್ಟಿನಲ್ಲಿ ರಾಜಕೀಯ ಮುಖಂಡರು ಹೆಚ್ಚಿ ಆಕ್ಟಿವ್ ಆಗುತ್ತಿದ್ದಾರೆ.  ಇದೇ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರೋರ್ವರು ಬಿಜೆಪಿ ಮುಖಂಡರ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ. 

ಬೆಂಗಳೂರು : ರಾಮನಗರ ಕ್ಷೇತ್ರದ ಉಪ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ಚುನಾವಣಾ ಅಖಾಡ ಗರಿಗೆದರಿದೆ. ಕಾಂಗ್ರೆಸ್ ಮುಖಂಡರು ಬಿಜೆಪಿಯತ್ತ ಮುಖ ಮಾಡಿದ್ದಾರೆ. 

ರಾಮನಗರದ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಹಾಗೂ ಕೆಲ ಮುಖಂಡರು ಬಿಜೆಪಿಯತ್ತ ಚಿತ್ತ ಹರಿಸಿದ್ದಾರೆ.

 ಹಾಲಿ ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಬಿಜೆಪಿ ಮುಖಂಡ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ. 

ಚಂದ್ರಶೇಖರ್ ಜತೆಗೆ ಹಲವು ಕಾಂಗ್ರೆಸ್ ಮುಖಂಡರು ಕೂಡ ಚರ್ಚೆ ನಡೆಸಿದ್ದು, ಈ ನಿಟ್ಟಿನಲ್ಲಿ ರಾಮನಗರ ಚುನಾವಣಾ ಅಖಾಡ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.