* ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ* ಬೆಂಗಳೂರಿನ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ* ಬಿಎಸ್ ಯಡಿಯೂರಪ್ಪ ಮೊಮ್ಮಗಳ ಸಾವಿಗೆ ಸಂತಾಪ ಸೂಚಿಸಿದ ಸಿದ್ದು
ಬೆಂಗಳೂರು, (ಜ.28): ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು (BS Yediyurappa Granddaughter) ಡಾ. ಸೌಂದರ್ಯ(Dr Soundarya) ನಿಧನಕ್ಕೆ ವಿಪಕ್ಷನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ(Siddaramaiah), ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!
ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ ಎಂದು ಹೇಳುವ ಮೂಲಕ ತಮ್ಮ ಪುತ್ರ ರಾಕೇಶ್‌ನನ್ನು ಕಳೆದುಕೊಂಡಾಗ ಆಗಿದ್ದ ನೋವು ಹೊರಹಾಕಿದ್ದಾರೆ.
ಫಾರ್ಮ್ ಹೌಸ್‌ನಲ್ಲಿ ಅಂತ್ಯಕ್ರಿಯೆ
ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ನೇಣಿಗೆ ಶರಣಾಗಿ ಶುಕ್ರವಾರ (ಜನವರಿ 28) ಬೆಳಗ್ಗೆ ಮೃತಪಟ್ಟಿದ್ದರು. ಇದೀಗ, ಸಂಜೆ ವೇಳೆಗೆ ಪತಿ ನೀರಜ್ ಫಾರ್ಮ್ಹೌಸ್ನಲ್ಲಿ ಸೌಂದರ್ಯ ಅಂತ್ಯಕ್ರಿಯೆ ನಡೆಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯ ಪತಿ ನೀರಜ್ ಫಾರ್ಮ್ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ವೀರಶೈವ ಆಗಮ ಪದ್ಧತಿಯಂತೆ ಬಿಲ್ವಪತ್ರೆ ಹಾಗೂ ವಿಭೂತಿ ಬಳಸಿ ಡಾ. ಸೌಂದರ್ಯ ಅಂತ್ಯಕ್ರಿಯೆ ನಡೆದಿದೆ.
ಡಾ. ಸೌಂದರ್ಯ ಬೆಂಗಳೂರಿನ ವಸಂತನಗರದಲ್ಲಿನ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಡಾ. ಸೌಂದರ್ಯ ನೇಣಿಗೆ ಶರಣಾಗಿದ್ದರು. ಫ್ಯಾನ್ಗೆ ನೇಣು ಬಿಗಿದುಕೊಂಡು ಡಾ. ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಳಗ್ಗೆ 8 ಗಂಟೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಸೌಂದರ್ಯ ಪತಿ ಡಾ. ನೀರಜ್ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಘಟನೆ ನಡೆದಿದೆ.
ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದ ಹಿನ್ನೆಲೆ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಪತಿ ಮನೆಗೆ ಬಂದು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. ದೇಹ ಬಿಸಿಯಾಗಿದ್ದರಿಂದ ಸಮೀಪದ ಮಲ್ಲಿಗೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಮಲ್ಲಿಗೆ ಆಸ್ಪತ್ರೆಯಲ್ಲಿ ಡಾ. ಸೌಂದರ್ಯ ಜೀವ ಉಳಿಸಲು ಯತ್ನ ಮಾಡಲಾಗಿತ್ತು. ಆದ್ರೆ ವೆಂಟಿಲೇಟರ್ಗೆ ಹಾಕಿದ್ರೂ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಲ್ಲಿಗೆ ಆಸ್ಪತ್ರೆಯಲ್ಲಿ ಡಾ. ಸೌಂದರ್ಯ ಕೊನೆಯುಸಿರೆಳೆದಿದ್ದರು.
