ಬೆಂಗಳೂರು (ಜೂ.06): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು ಸೋಮವಾರದವರೆಗೆ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಪರೀಕ್ಷೆ ನಡೆಸಿದರೂ ಕೊರೋನಾ ಸೋಂಕು ವರದಿ ನೆಗೆಟಿವ್‌ ಬಂದಿತ್ತು. ಹೀಗಾಗಿ ಸಾಮಾನ್ಯಚಳಿ, ಜ್ವರಕ್ಕೆ ಚಿಕಿತ್ಸೆ ನೀಡಲಾಗಿತ್ತು. 

ಸಿದ್ದು ಆರೋಗ್ಯ ವಿಚಾರಿಸಿದ ಜಮೀರ್, ಬಳಿಕ ಅಭಿಮಾನಿಗಳಿಗೆ ಹೇಳಿದ್ದು ಹೀಗೆ

ಇದೀಗ ಸಂಪೂರ್ಣ ಗುಣಮುಖರಾಗಿದ್ದು ಮತ್ತೊಮ್ಮೆ ಕೊರೋನಾ ಸೋಂಕು ಪರೀಕ್ಷೆ ನಡೆಸಿದ ವರದಿಯೂ ನೆಗೆಟಿವ್‌ ಬಂದಿದೆ.

ಶನಿವಾರ ಹಾಗೂ ಭಾನುವಾರ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲು ಸಿದ್ದರಾಮಯ್ಯ ಬಯಸಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.