'ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು'

* ಪುನೀತ್ ರಾಜ್‍ಕುಮಾರ್‌ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಒತ್ತಾಯ
* ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹ
* ತುಮಕೂರಿನ ಗುಬ್ಬಿಯಲ್ಲಿ ಸಿದ್ದು ಹೇಳಿಕೆ

Congress Leader siddaramaiah urges padma shri award To Puneeth Rajkumar brj

ತುಮಕೂರು, (ನ.01): ದಿವಂಗತ ಪುನೀತ್ ರಾಜ್‍ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ತುಮಕೂರಿನ ಗುಬ್ಬಿಯಲ್ಲಿ ಇಂದು (ನ.01) ಖಾಸಗಿ ಹೈಟೆಕ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್ ಅವರಲ್ಲಿ ಅಪಾರವಾದ ಪ್ರತಿಭೆ ಇತ್ತು, ಹೀಗಾಗಿ ಪುನೀತ್ ರಾಜ್‍ಕುಮಾರ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ರಾಜ್ಯ ಸರಕಾರ ಕೂಡ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದರು.

ಕೋರ್ಟ್‌ ಆದೇಶದಂತೆ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ: ಸಚಿವ ಸುನೀಲ್ ಕುಮಾರ್

ಇದೇ ವೇಳೆ, ತಾವು ಕೂಡ ಕೇಂದ್ರ, ರಾಜ್ಯ ಸರಕಾರಕ್ಕೆ ಪತ್ರ ಬರೆದು, ಪ್ರಶಸ್ತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.

ಪುನೀತ್ ಅವರು ಇನ್ನೂ ಎತ್ತರಕ್ಕೆ ಬೆಳೆಯುತ್ತಿದ್ದ ವಯಸ್ಸಿನಲ್ಲಿಯೇ ಅಕಾಲಿಕ ಮರಣಕ್ಕೆ ತುತ್ತಾಗಿರುವುದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ, ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಚರ್ಚೆ!

ಇನ್ನು ಈ ಬಗ್ಗೆ ಪೇಸ್‌ಬುಕ್‌ನಲ್ಲೂ ಬರೆದುಕೊಂಡಿರುವ ಸಿದ್ದರಾಮಯ್ಯ, ಯಾವ ಪ್ರಶಸ್ತಿ, ಗೌರವಗಳಿಗಿಂತಲೂ  ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ  ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್  ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತಾ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಒತ್ತಾಯ ಮಾಡಲಾಗಿತ್ತು. ಆದರೆ ಕೋರ್ಟ್‌ ಆದೇಶದ ಪ್ರಕಾರ ಸಾಧ್ಯವಾಗದ ಕಾರಣ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಡ ಹೇರಲಾಗಿದೆ. ಇದರ ಹಿನ್ನೆಲೆ ಸಿಎಂ ಮುಂಬರುವ ದಿನಗಳಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಇನ್ನು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಸಿನಿ ಗಣ್ಯರು ಮತ್ತು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಆದರೆ ಕೋರ್ಟ್‌ ಆದೇಶದಂತೆ ಅನುಮತಿ ಇಲ್ಲದ ಕಾರಣ ಪುನೀತ್ ಸಮಾಜ ಸೇವೆಯನ್ನು ಪರಿಗಣಿಸಿ ಗೌರವ ಸಲ್ಲಿಸುತ್ತೇವೆ, ಎಂದು ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Latest Videos
Follow Us:
Download App:
  • android
  • ios